ಧಾರವಾಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಸ್ಥಳ ಮತ್ತು ದಿನಾಂಕ ಕೊನೆಗೂ ನಿಗದಿ
ಗೊಂದಲ ಮತ್ತು ವ್ಯಾಪಕ ಚರ್ಚೆ ಬಳಿಕ ಈ ವರ್ಷದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸ್ಥಳ...

ಧಾರವಾಡ: ಗೊಂದಲ ಮತ್ತು ವ್ಯಾಪಕ ಚರ್ಚೆ ಬಳಿಕ ಈ ವರ್ಷದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸ್ಥಳ ನಿಗದಿಯಾಗಿದೆ. ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಆವರಣದಲ್ಲಿ ಜನವರಿ 4ರಿಂದ 6ರವರೆಗೆ ಸಮ್ಮೇಳನ ನಡೆಯಲಿದೆ.
ಪಾಟೀಲ ಪುಟ್ಟಪ್ಪ ಸೇರಿದಂತೆ ಹಲವು ಹಿರಿಯ ಬರಹಗಾರರು ಮತ್ತು ಹಲವು ಸಮಿತಿ ಸದಸ್ಯರುಗಳ ಮಧ್ಯೆ ದೀರ್ಘಕಾಲದ ಮಾತುಕತೆ ನಡೆದು ಕೊನೆಗೂ ಸ್ಥಳ ಮತ್ತು ದಿನಾಂಕ ನಿಗದಿಪಡಿಸಲಾಯಿತು.
ಈ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ನಿಗದಿಪಡಿಸುವುದು ಸವಾಲಾಯಿತು, ಕೊನೆಗೂ ಎಲ್ಲರ ಒಪ್ಪಿಗೆಯಂತೆ ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ಆರಿಸಿಕೊಂಡಿದ್ದೇವೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದರು. ಕೆಲವು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ನಾಟಕಗಳನ್ನು ನಗರದ ಕೇಂದ್ರಗಳಲ್ಲಿ ನಡೆಸಲಾಗುವುದು. ರಂಗಾಯಣದಲ್ಲಿ ನಾಟಕ ಮತ್ತು ಸಂಗೀತ ಕಾರ್ಯಕ್ರಮವನ್ನು ಕಲಾಭವನದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಮೂರು ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಮೂರು ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ಸಾಧ್ಯತೆಯಿರುತ್ತದೆ. ಕೆಸಿಡಿ ಮೈದಾನದಲ್ಲಿ ವಾಹನಗಳ ನಿಲುಗಡೆ ಮತ್ತು ಬೃಹತ್ ಪ್ರಮಾಣದಲ್ಲಿ ಜನರನ್ನು ಸೇರಿಸಿ ಸಂಘಟಿಸಲು ಸಾಧ್ಯವಾಗದಿರುವ ಹಿನ್ನಲೆಯಲ್ಲಿ ವಿಸ್ತೀರ್ಣದಲ್ಲಿ ಬೃಹತ್ ಆಗಿರುವ ಯುಎಎಸ್ ಆವರಣವನ್ನು ಆಯ್ಕೆ ಮಾಡಲಾಯಿತು. ಮೊನ್ನೆ ತಾನೇ ಮುಗಿದ ನಾಲ್ಕು ದಿನಗಳ ಕಾಲ ನಡೆದ ಕೃಷಿ ಮೇಳದಲ್ಲಿ 10 ಲಕ್ಷಕ್ಕೂ ಜನರು ಭಾಗವಹಿಸಿದ್ದರು ಎಂದು ಮನು ಬಳಿಗಾರ್ ಸುದ್ದಿಗಾರರಿಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


