ರಾಯಚೂರಿನಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 19
ಪ್ರಸಕ್ತ ವರ್ಷ ರಾಯಚೂರು ಜಿಲ್ಲೆಯೊಂದರಲ್ಲಿಯೇ 19 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರೆಲ್ಲರೂ...

ರಾಯಚೂರು: ಪ್ರಸಕ್ತ ವರ್ಷ ರಾಯಚೂರು ಜಿಲ್ಲೆಯೊಂದರಲ್ಲಿಯೇ 19 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರೆಲ್ಲರೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಅಥವಾ ಇತರ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಜಿಲ್ಲಾ ಕೃಷಿ ಇಲಾಖೆ ನೀಡಿರುವ ಅಂಕಿಅಂಶ ಪ್ರಕಾರ, ನವೆಂಬರ್ 19ರವರೆಗೆ ದಾಖಲೆಯಲ್ಲಿರುವಂತೆ ಈ ವರ್ಷ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡವರ ರೈತರ ಸಂಖ್ಯೆ 19. ದೇವದುರ್ಗ ತಾಲ್ಲೂಕಿನಲ್ಲಿ ಒಬ್ಬ ವ್ಯಕ್ತಿಯ ಆತ್ಮಹತ್ಯೆಯನ್ನು ಕೃಷಿ ಇಲಾಖೆ ಇನ್ನೂ ದೃಢಪಡಿಸಿಲ್ಲ.
ಈ ಜಿಲ್ಲೆಯಲ್ಲಿ ಕಳೆದ ವರ್ಷ 35 ರೈತರು ಮೃತಪಟ್ಟಿದ್ದರು. ಈ ವರ್ಷ ಅತಿ ಹೆಚ್ಚು ಮಂದಿ ರೈತರು ಸಿಂಧನೂರು ತಾಲ್ಲೂಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿ 9 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚೇತನಾ ಪಾಟೀಲ್ ಹೇಳುವ ಪ್ರಕಾರ, ಸಿಂಧನೂರಿನಲ್ಲಿ ಒಣಭೂಮಿಯಿದೆ. ಹೀಗಾಗಿ ಬೆಳೆ ಬೆಳೆಯಲು ಕಷ್ಟವಾಗುತ್ತಿದೆ ಎನ್ನುತ್ತಾರೆ.
ಮಾನ್ವಿ ತಾಲ್ಲೂಕಿನಲ್ಲಿ 5 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರು ಲಿಂಗಸುಗೂರು ತಾಲ್ಲೂಕಿನಲ್ಲಿ, ರಾಯಚೂರು ಮತ್ತು ದೇವದುರ್ಗ ತಾಲ್ಲೂಕಿನಲ್ಲಿ ತಲಾ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಕಿಅಂಶಗಳ ಪ್ರಕಾರ, 19 ಮಂದಿ ರೈತರಲ್ಲಿ 9 ಮಂದಿ ಎಸ್ ಸಿ, ಎಸ್ ಟಿ ಸಮುದಾಯದವರು ಹಾಗೂ 10 ಮಂದಿ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಾಜ್ಯ ಸರ್ಕಾರ 10 ಮಂದಿ ರೈತರ ಕುಟುಂಬಗಳಿಗೆ ಪರಿಹಾರ ಘೋಷಿಸಿದೆ. ಮೂರು ಪ್ರಕರಣಗಳು ತಿರಸ್ಕೃತವಾಗಿದ್ದು ಉಳಿದ 6 ಪ್ರಕರಣಗಳನ್ನು ಪರಿಶೀಲಿಸಬೇಕಿದೆ.
ಈ ವರ್ಷ ಶೇಕಡಾ 50ಕ್ಕಿಂತಲೂ ಕಡಿಮೆ ಮಳೆ ಬಂದಿದ್ದರಿಂದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದರು. ಇದರಿಂದ ಸುಮಾರು 1.25 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಜಿಲ್ಲೆಗೆ 90 ಕೋಟಿ ರೂಪಾಯಿ ನೆರವು ಕೇಳಿತ್ತು.
ರಬಿ ಋತುವಿನಲ್ಲಿ ಮಳೆಯಾಗಬಹುದು ಎಂಬ ರೈತರ ಆಸೆ ನಿರಾಸೆಯಾಗಿದೆ. ಇದೀಗ ರೈತರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಕಡೆಗೆ ನಿರೀಕ್ಷೆಯ ಕಂಗಳಿಂದ ನೋಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


