ರಾಜ್ಯ

ಬೆಂಗಳೂರು: ಬಿಬಿಎಂಪಿ ಜಾಹೀರಾತಿನಲ್ಲಿ ಜನಪ್ರತಿನಿಧಿಗಳ ಚಿತ್ರ ನಿಷಿದ್ಧ

ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಸರ್ಕಾರಿ ಹಾಗೂ ಪಾಲಿಕೆಯಿಂದ ಕೈಗೊಳ್ಳುವ ಯೋಜನೆ ಹಾಗೂ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸಾರ್ವಜನಿಕ ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ ಫೋಟೋ ಬಳಸುವಂತಿಲ್ಲ ಎಂದು ಪಾಲಿಕೆ ಆಯುಕ್ತ...

ಬೆಂಗಳೂರು: ಬಿಬಿಎಂಪಿ ಜಾಹೀರಾತಿನಲ್ಲಿ ಜನಪ್ರತಿನಿಧಿಗಳ ಚಿತ್ರ ನಿಷಿದ್ಧ
ಸಂಗ್ರಹ ಚಿತ್ರ
Published On :
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಸರ್ಕಾರಿ ಹಾಗೂ ಪಾಲಿಕೆಯಿಂದ ಕೈಗೊಳ್ಳುವ ಯೋಜನೆ ಹಾಗೂ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸಾರ್ವಜನಿಕ ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ ಫೋಟೋ ಬಳಸುವಂತಿಲ್ಲ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ. 
ನೀರಿನ ಘಟಕ, ರಸ್ತೆ, ಬಸ್ ನಿಲ್ದಾಣ ಸೇರಿದಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಿಂದ ಕೈಗೊಳ್ಳುವ ಯಾವುದೇ ಯೋಜನೆ ಹಾಗೂ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸಾರ್ವಜನಿಕ ಜಾಹೀರಾತುಗಳಲ್ಲಿ ಪ್ರಧಾನಮಂತ್ರಿ, ರಾಷ್ಟ್ರಪತಿ, ಮುಖ್ಯ ನ್ಯಾಯಮೂರ್ತಿಗಳು, ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು ಹಾಗೂ ಮಹಾತ್ಮರ ಫೋಟೋಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ಜನಪ್ರತಿನಿಧಿಗಳ ಹೆಸರಾಗಲಿ, ರಾಜಕೀಯ ಪಕ್ಷಗಳ ನಾಯಕರು, ಮುಖಂಡರ ಫೋಟೋಗಳನ್ನಾಗಲಿ ಬಳಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ 2013ರ ಪ್ರಕರಣವೊಂದನ್ನು ಇತ್ಯರ್ಥಪಡಿಸುವಾಗ ತೀರ್ಪು ನೀಡಿದೆ. 
ಹಾಗಾಗಿ ಇನ್ನು ಮುಂದೆ ಬಿಬಿಎಂಪಿ ವ್ಯಾಪ್ತಿಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಘಟಕ, ಬಸ್ ನಿಲ್ದಾಣಗಳು ಸೇರಿದಂತೆ ಇನ್ನಿತರೆ ಪಾಲಿಕೆ ಅಥವಾ ಸರ್ಕಾರಗಳ ಸಾರ್ವಜನಿಕ ಜಾಹೀರಾತು, ಪ್ರಕಟಣೆಗಳಲ್ಲಿ ಸುಪ್ರೀಂಕೋರ್ಟ್ ವಿನಾಯಿತಿ ನೀಡಿರುವ ಗಣ್ಯರು ಹಾಗೂ ಮಹಾತ್ಮರ ಫೋಟೋಗಳನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪಕ್ಷಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳ ಹೆಸರನ್ನು ಹಾಕುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.