ರಾಜ್ಯ

ಬೆಂಗಳೂರು: ಹಳೆ ದ್ವೇಷದ ಹಿನ್ನಲೆಯಲ್ಲಿ ಜಿಮ್ ತರಬೇತುದಾರನ ಕೊಲೆ

ಹಳೆ ದ್ವೇಷದ ಮೇಲೆ ದುಷ್ಕರ್ಮಿಗಳ ಗುಂಪೊಂದು ಜಿಮ್ ತರಬೇತುದಾರ ಹಾಗೂ ಉದ್ಯಮಿಯನ್ನು ...

ಬೆಂಗಳೂರು: ಹಳೆ ದ್ವೇಷದ ಹಿನ್ನಲೆಯಲ್ಲಿ ಜಿಮ್ ತರಬೇತುದಾರನ ಕೊಲೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಹಳೆ ದ್ವೇಷದ ಮೇಲೆ ದುಷ್ಕರ್ಮಿಗಳ ಗುಂಪೊಂದು ಜಿಮ್ ತರಬೇತುದಾರ ಹಾಗೂ ಉದ್ಯಮಿಯನ್ನು ಮಚ್ಚಿನಿಂದ ಇರಿದು ಕೊಲೆ ಮಾಡಿದ ಘಟನೆ ಶಿವಾಜಿನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು 30 ವರ್ಷದ ಸೈಯದ್ ಇರ್ಫಾನ್ ಎಂದು ಗುರುತಿಸಲಾಗಿದೆ. ಈತ ಚಾಂದಿನಿ ಚೌಕ್ ರಸ್ತೆಯ ನಿವಾಸಿಯಾಗಿದ್ದು ಶಿವಾಜಿನಗರದಲ್ಲಿ ಅಕ್ವೇರಿಯಂ ಅಂಗಡಿ ನಡೆಸುತ್ತಿದ್ದರು. ಕಳೆದ ಮಧ್ಯರಾತ್ರಿ 1.15ರ ಸುಮಾರಿಗೆ ಬೈಕ್ ನಲ್ಲಿ ಜ್ಯೂಸ್ ಅಂಗಡಿಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಇರಿದು ಕೊಲೆ ಮಾಡಿದ್ದಾರೆ.

Story image


 ಜಿಮ್ ತರಬೇತುದಾರ ಸೈಯದ್ ಇರ್ಫಾನ್

ಸೈಯದ್ ಇರ್ಫಾನ್ ಶಿವಾಜಿನಗರದ ಹಳೆ ಸ್ಮಶಾನ ರಸ್ತೆ ಪಕ್ಕ ಹೋಗುತ್ತಿದ್ದಾಗ ಹೆಲ್ಮೆಟ್ ಧರಿಸಿದ ಮೂವರು ವ್ಯಕ್ತಿಗಳು ಬೈಕ್ ನಲ್ಲಿ ಅವರನ್ನು ಅನುಸರಿಸಿ ಬಂದು ಮಚ್ಚಿನಿಂದ ದಾಳಿ ಮಾಡಿದರು. ತಪ್ಪಿಸಿಕೊಳ್ಳಲು ಯತ್ನಿಸಿದ ಇರ್ಫಾನ್ ತನ್ನ ಪತ್ನಿಗೆ ಕರೆ ಮಾಡಿ ಮೂವರು ತನ್ನ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ತಕ್ಷಣವೇ ಕುಟುಂಬಸ್ಥರು ಸ್ಥಳಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ದರು. ಆದರೆ ತೀವ್ರ ರಕ್ತ ಸೋರಿಕೆಯಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇರ್ಫಾನ್ ತಂದೆ ಸೈಯದ್ ಮುಬಾರಕ್ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.