ಈರುಳ್ಳಿ ಬೆಲೆ ಕುಸಿತ: ವೈರಲ್ ಆಯ್ತು ಪ್ರಧಾನಿಗೆ ಬಾಗಲಕೋಟೆಯ ರೈತ ಬರೆದ ಟ್ವೀಟ್
ಈರುಳ್ಳಿ ಬೆಲೆ ದಿಢೀರ್ ಕುಸಿತದಿಂದ ಸಂಕಷ್ಟಕ್ಕೀಡಾಗಿರುವ ರೈತರ ಧನಿಯಾಗಿ ಬಾಗಲಕೋಟೆಯ ರೈತ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

Published On :
ನವದೆಹಲಿ: ಈರುಳ್ಳಿ ಬೆಲೆ ದಿಢೀರ್ ಕುಸಿತದಿಂದ ಸಂಕಷ್ಟಕ್ಕೀಡಾಗಿರುವ ರೈತರ ಧನಿಯಾಗಿ ಬಾಗಲಕೋಟೆಯ ರೈತ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಈರುಳ್ಳಿ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಈ ಬಗ್ಗೆ ಗಮನ ಹರಿಸುವಂತೆ ಬಾಗಲಕೋಟೆಯ ಬೆನಕಕಟ್ಟಿಯ ರೈತ ಪ್ರಶಾಂತ್ ಎಂಬವರುಪ್ರಧಾನಿ ನರೇಂದ್ರ ಮೋದಿಗೆ ಟ್ವೀಟ್ ಮಾಡಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಪ್ರಶಾಂತ್, ಈರುಳ್ಳಿ ಬೆಲೆ ಕುಸಿತ ರೈತರನ್ನು ಸಾಲದ ಸುಳಿಗೆ ಸಿಲುಕಿಸಿದೆ. ರೈತರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದು, ಕೂಡಲೇ ಬೆಲೆ ಕುಸಿತ ನಿಯಂತ್ರಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಈರುಳ್ಳಿ ಬಿತ್ತನೆ , ಬೆಳೆ ಬೆಳೆಯಲು ಖರ್ಚಾದ ಹಣ , ನಷ್ಟದ ಬಗ್ಗೆ ಪ್ರಶಾಂತ್ ಮಾಹಿತಿ ನೀಡಿದ್ದು, ನಾವು ಕನ್ನಡಿಗರು ನಮ್ಮ ಸಮಸ್ಯೆಗೆ ಗಮನ ಹರಿಸಿ ಎಂದು ಪ್ರಶಾಂತ್ ಅವರು ಪ್ರಧಾನಿಗೆ ಮನವಿ ಮಾಡಿದ್ದಾರೆ.
ಪ್ರಶಾಂತ್ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiTwitterಟ್ವಿಟರ್PM Modiಪ್ರಧಾನಿ ಮೋದಿPMOಪಿಎಂಒಈರುಳ್ಳಿ ದರonion pricesBagalkot farmerಬಾಗಲಕೋಟೆ ರೈತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


