ಗೌರಿ ಲಂಕೇಶ್ ಪ್ರಕರಣ: 9 ಸಾವಿರ ಪುಟದ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ಶುಕ್ರವಾರ ಪ್ರಕರಣದ ಕುರಿತು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

Published On :
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ಶುಕ್ರವಾರ ಪ್ರಕರಣದ ಕುರಿತು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಬೆಂಗಳುರು 1ನೇ ಸೆಷನ್ಸ್ ಕೋರ್ಟ್‌ಗೆ 9235 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಚಾರ್ಜ್ ಶೀಟ್ ನಲ್ಲಿ ಹೆಸರಿಸಲಾದ ಕೆಲವರು "ಸನಾತನ ಸಂಸ್ಥೆ" ಜತೆ ನಂಟು ಹೊಂದಿದ್ದಾರೆ ಎಂದು ಹೇಳಿದೆ.
ಶುಕ್ರವಾರ ಸಂಜೆ ತನಿಕಾಧಿಕಾರಿಗಳ ತಂಡ ಟ್ರಂಕ್ ನಲ್ಲಿ ಚಾರ್ಜ್ ಶೀಟ್ ಗಳನ್ನು ಹೊತ್ತು ತಂದು ನ್ಯಾಯಾಲಯಕ್ಕೆ ಒಪ್ಪಿಸಿದೆ.
"ಪ್ರಕರಣದಲ್ಲಿ ಸನಾತನ ಸಂಸ್ಥೆಯ ನೇರ ಕೈವಾಡವಿದೆ ಎನ್ನುವುದು ಗೊತ್ತಿಲ್ಲ ಆದರೆ ಬಂಧಿತರಾದವರಲ್ಲಿ ಕೆಲವರು ಸಂಸ್ಥೆ ಜತೆಗೆ ಸಂಪರ್ಕದಲ್ಲಿದ್ದರೆನ್ನುವ ಬಗ್ಗೆ ಸಾಕ್ಷಿಗಳು ಲಭಿಸಿದೆ" ಎನ್ನಲಾಗಿದೆ.
"ನಾವು ಹಿಂದೂರಾಷ್ಟ್ರದ ಕನಸು ಕಂಡಿದ್ದೆವು. ಅದಕ್ಕಾಗಿ ಹೋರಾಡುತ್ತಿದ್ದೆವು. ೨೦೨೩ರ ಒಳಗೆ ಭಾರತವನ್ನು ಹಿಂದೂರಾಷ್ಟವಾಗಿಸುವುದು ನಮ್ಮ ದ್ಯೇಯವಾಗಿತ್ತು" ಎಂದು ಆರೋಪಿಗಳು ನೀಡಿರುವ ಹೇಳಿಕೆ ಚಾರ್ಜ್ ಶೀಟ್ ನಲ್ಲಿ ದಾಖಲಾಗಿದೆ.
2017ರ ನವೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಅವರ ಮನೆಯ ಸಮೀಪವೇ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು.ಈ ಸಂಬಂಧ ಇದುವರೆಗೆ ಹದಿನೇಳು ಆರೋಪಿಗಳನ್ನು ಬಂಧಿಸಲಾಗಿದ್ದು ನಿಹಾಲ್ ಅಲಿಯಾಸ್ ದಾದಾ ಎಂಬ ಪ್ರಮುಖ ಆರೋಪಿಗಾಗಿ ಪೋಲೀಸರು ಹುಡುಕಾಟ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


