ರಾಜ್ಯದಲ್ಲಿ ಶೀಘ್ರವೇ ನರ್ಸಿಂಗ್ ವಿಶ್ವವಿದ್ಯಾನಿಲಯ ಸ್ಥಾಪನೆ: ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಹೆಲ್ತ್ ಟೂರಿಸಂಗೆ ಪೂರಕವಾಗಿ ನರ್ಸಿಂಗ್ ವಿಶ್ವವಿದ್ಯಾಲಯ ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷ ಣ ಮತ್ತು ಜಲಸಂಪನ್ಮೂಲ ...

Published On :
ಬೆಳಗಾವಿ: ರಾಜ್ಯದಲ್ಲಿ ಹೆಲ್ತ್ ಟೂರಿಸಂಗೆ ಪೂರಕವಾಗಿ ನರ್ಸಿಂಗ್ ವಿಶ್ವವಿದ್ಯಾಲಯ ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷ ಣ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಜೆಎನ್‌ಎಂಸಿ ಕಾಲೇಜಿನಲ್ಲಿ ಕೆಎಲ್‌ಇ ಸಂಸ್ಥೆ ಆಯೋಜಿಸಿದ್ದ 'ಅಂತಾರಾಷ್ಟ್ರೀಯ ನರ್ಸಿಂಗ್ ಸಮ್ಮೇಳನ' ಉದ್ಘಾಟಿಸಿ ಮಾತನಾಡಿದ ಅವರು, ನರ್ಸಿಂಗ್ ವಿಶ್ವ ವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಕಾನೂನು ಸಲಹೆ ಮತ್ತು ತಜ್ಞರ ಅಭಿಪ್ರಾಯ ಪಡೆದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಜತೆಗೂ ಸಮಾಲೋಚನೆ ನಡೆಸಿ ವರದಿ ಸಂಗ್ರಹಿಸಲಾಗಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿಯೇ ಹೊಸ ವಿಶ್ವವಿದ್ಯಾಲಯ ಸ್ಥಾಪನೆಯ ಪ್ರಸ್ತಾವ ಕೂಡ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಸದ್ಯ ನರ್ಸಿಂಗ್ ಕ್ಷೇತ್ರ ಹಲವಾರು ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದೆ. ಅಂತಾರಾಷ್ಟ್ರೀಯ ನರ್ಸಿಂಗ್ ಸಮ್ಮೇಳನದಲ್ಲಿ ನರ್ಸಿಂಗ್ ಕ್ಷೇತ್ರದ ಜಾಗತಿಕ ಪ್ರತಿನಿಧಿಗಳು ಒಂದು ಕಡೆ ಸೇರಿ ಚರ್ಚೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಈ ಸಮ್ಮೇಳನದಲ್ಲಿ ಕೈಗೊಳ್ಳುವ ತೀರ್ಮಾನ ಮತ್ತು ಸಲಹೆಗಳನ್ನು ಇಲಾಖೆಗೆ ಕಳುಹಿಸಿಕೊಟ್ಟರೆ ಅನುಷ್ಠಾನ ಮಾಡಲು ರಾಜ್ಯಸರ್ಕಾರ ಕ್ರಮ ವಹಿಸಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


