ರಾಜ್ಯ

ಅಭಿಮಾನದ ಹೆಸರಿನಲ್ಲಿ ಜೀವ ಕಳೆದುಕೊಳ್ಳಬೇಡಿ: ಅಂಬಿ ಅಭಿಮಾನಿಗಳಿಗೆ ಸಿಎಂ ಕುಮಾರಸ್ವಾಮಿ ಮನವಿ

ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ನಿಧನಕ್ಕೆ ಅವರ ಅಭಿಮಾನಿಗಳು ಭಾವೋದ್ವೇಗಕ್ಕೆ ...

ಅಭಿಮಾನದ ಹೆಸರಿನಲ್ಲಿ ಜೀವ ಕಳೆದುಕೊಳ್ಳಬೇಡಿ: ಅಂಬಿ ಅಭಿಮಾನಿಗಳಿಗೆ ಸಿಎಂ ಕುಮಾರಸ್ವಾಮಿ ಮನವಿ
ಹೆಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ನಿಧನಕ್ಕೆ ಅವರ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಅಂಬರೀಷ್ ಅವರ ನಿಧನ ಇಂದು ಎಲ್ಲರಿಗೂ ದುಃಖವನ್ನುಂಟುಮಾಡಿದೆ, ಅವರ ಮೇಲೆ ಇಟ್ಟಿರುವ ಪ್ರೀತಿ, ಅಭಿಮಾನದಿಂದ ಜೀವನದಲ್ಲಿ ಆತ್ಮಹತ್ಯೆಯಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡು ಅವರ ನಂಬಿಕೊಂಡಿರುವ ಕುಟುಂಬದವರನ್ನು ಸಂಕಷ್ಟಕ್ಕೊಡಬೇಡಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಅಂಬರೀಷ್ ಅವರ ಹಠಾತ್ ಸಾವಿನ ಹಿನ್ನಲೆಯಲ್ಲಿ ಮದ್ದೂರಿನಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಈ ರೀತಿಯ ಕ್ರಮಗಳನ್ನು ಯಾರೂ ತೆಗೆದುಕೊಳ್ಳಬೇಡಿ, ಹುಟ್ಟಿದ ವ್ಯಕ್ತಿಗೆ ಸಾವು ನಿಶ್ಚಿತ, ಅದನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಇಂದು ಸಂಯಮದಿಂದ ವರ್ತಿಸಬೇಕಿದೆ, ಜೀವನ ಎಲ್ಲರಿಗೂ ಮುಖ್ಯ, ಅಮೂಲ್ಯ ಜೀವವನ್ನು ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಮಂಡ್ಯ ಅಭಿಮಾನಿಗಳ ಇಚ್ಛೆಯಂತೆ ಅವರ ಪಾರ್ಥೀವ ಶರೀರವನ್ನು ಇಂದು ಸಂಜೆ ವಿಮಾನದಲ್ಲಿ ರವಾನೆ ಮಾಡಿ ನಾಳೆ ಬೆಳಗ್ಗೆಯವರೆಗೆ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಇಡಲಾಗುವುದು. ಅಲ್ಲಿ ಯಾರೂ ಆಕ್ರೋಶ, ಗಲಾಟೆ ಎಬ್ಬಿಸದೆ ಶಾಂತ ರೀತಿಯಿಂದ ಅಂತಿಮ ದರ್ಶನ ಪಡೆಯಲಿ, ಸರ್ಕಾರ ಸಕಲ ವ್ಯವಸ್ಥೆ ಮಾಡುತ್ತಿದೆ, ನಾಳೆ ಬೆಳಗ್ಗೆ ಮತ್ತೆ ಕಳೇಬರವನ್ನು ಬೆಂಗಳೂರಿಗೆ ತರಬೇಕಾಗಿದೆ. ಈ ಸಂದರ್ಭದಲ್ಲಿ ಕೂಡ ಅವರ ಅಭಿಮಾನಿಗಳು ಯಾವುದೇ ದುರ್ವರ್ತನೆ ತೋರಬಾರದು ಎಂದು ಸಿಎಂ ಕುಮಾರಸ್ವಾಮಿ ಮನವಿ ಮಾಡಿದರು.

ಮದ್ದೂರಿನ ಹೊಟ್ಟೆದೊಡ್ಡಣಗೌಡನ ದೊಡ್ಡಿ ಎಂಬಲ್ಲಿ ತಮ್ಮಯ್ಯ ಎಂಬ ಅಭಿಮಾನಿ ಚಲಿಸುತ್ತಿರುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.