ಅಭಿಮಾನಿಗಳ ಮನವಿಗೆ ಸ್ಪಂದಿಸಿ ಸೇನಾ ಹೆಲಿಕಾಫ್ಟರ್‌ನಲ್ಲಿ ಮಂಡ್ಯಗೆ ಅಂಬಿ ಪಾರ್ಥಿವ ಶರೀರ ರವಾನೆ!
ಮಂಡ್ಯದ ಗಂಡು ಅಂಬರೀಶ್ ಅವರನ್ನು ಕೊನೆಯ ಬಾರಿಗೆ ಕಾಣಬೇಕೆಂದು ಮಂಡ್ಯ ಜನತೆ ಕಣ್ಣೀರಿಟ್ಟಿದ್ದು ತವರಿಗೆ ಅಂಬಿ ಮೃತ ಶರೀರವನ್ನು ತರುವಂತೆ ಆಗ್ರಹಿಸಿದ್ದರು.

Published On :
ಬೆಂಗಳೂರು: ಮಂಡ್ಯದ ಗಂಡು ಅಂಬರೀಶ್ ಅವರನ್ನು ಕೊನೆಯ ಬಾರಿಗೆ ಕಾಣಬೇಕೆಂದು ಮಂಡ್ಯ ಜನತೆ ಕಣ್ಣೀರಿಟ್ಟಿದ್ದು ತವರಿಗೆ ಅಂಬಿ ಮೃತ ಶರೀರವನ್ನು ತರುವಂತೆ ಆಗ್ರಹಿಸಿದ್ದರು. ಇದಕ್ಕೆ ಸ್ಪಂಧಿಸಿರುವ ರಾಜ್ಯ ಸರ್ಕಾರ ಸೇನಾ ಹೆಲಿಕಾಫ್ಟರ್ ಮೂಲಕ ಮಂಡ್ಯಗೆ ಪಾರ್ಥಿವ ಶರೀರವನ್ನು ರವಾನಿಸಲಿದೆ.
ಏರ್ ಲಿಫ್ಟ್ ಮೂಲಕ ಮಂಡ್ಯಕ್ಕೆ ಅಂಬಿ ಪಾರ್ಥಿವ ಶರೀರ ಕೊಂಡೊಯ್ಯಲು ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಅಂಬಿ ಮೃತ ಶರೀರ ರವಾನೆಗೆ ಹೆಲಿಕಾಪ್ಟರ್ ನೀಡುವಂತೆ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದರು.
ರಾಜ್ಯ ಸರ್ಕಾರಕ್ಕೆ ಸ್ಪಂಧಿಸಿರುವ ನಿರ್ಮಾಲಾ ಸೀತಾರಾಮನ್ ಅವರು ಏಲ್ ಲಿಫ್ಟ್ ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯಗೆ ಅಂಬಿ ಪಾರ್ಥಿವ ಶರೀರ ರವಾನಿಸಿ ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ಇಂದು ಸಂಜೆ 4 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


