ಮಂಡ್ಯದ ಗಂಡು ಅಂಬರೀಶ್ ಸಾವಿನಲ್ಲೂ ವಿಕೃತಿ, ಕೀಳುಮಟ್ಟದ ಪೋಸ್ಟ್, ಹೇಸಿಗೆ ಮನಸ್ಥಿತಿ!
ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅಗಲಿಕೆಯಿಂದ ಇಡೀ ರಾಜ್ಯವೇ ದುಃಖತಪ್ತವಾಗಿದೆ. ಇಂತಹ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು...

Published On :
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅಗಲಿಕೆಯಿಂದ ಇಡೀ ರಾಜ್ಯವೇ ದುಃಖತಪ್ತವಾಗಿದೆ. ಇಂತಹ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು ದುಷ್ಟ ಸಂಹಾರ ಹೆಸರಿನಲ್ಲಿ ದಿಗ್ಗಜ ನಾಯಕನ ವಿರುದ್ಧ ಕೀಳುಮಟ್ಟದ ಪೋಸ್ಟ್ ಹಾಕಿ ವಿಕೃತಿ ಮೆರೆದಿದ್ದಾರೆ.
ಕನ್ನಡ ಚಿತ್ರರಂಗದ ತ್ರಿವಳಿಗಳಾದ ಡಾ| ರಾಜಕಮಾರ್, ವಿಷ್ಣುವರ್ಧನ್, ಅಂಬರೀಶ್ ಅವರ ವಿರುದ್ಧ ಕೀಳು ಮಟ್ಟದ ಭಾಷೆಗಳನ್ನು ಬಳಿಸಿ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸುವಂತೆ ಸೈಬರ್ ಕ್ರೈಂ ಠಾಣೆಗಳಿಗೆ ಕೆಪಿಸಿಸಿ ಮಾನವ ಹಕ್ಕು ವಿಭಾಗವು ದೂರು ಸಲ್ಲಿಸಿದೆ.
ಕೆಲ ಸಮಾಜಘಾತುಕ ಶಕ್ತಿಗಳು ಅನ್ಯ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಗಳನ್ನು ಖರೀದಿಸಿ, ಆ ಸಂಖ್ಯೆಗಳ ನೆರವಿನಿಂದಲೇ ನಕಲಿ ಖಾತೆ ತೆರೆಯುತ್ತಾರೆ. ಯಾವುದಾದರೂ ಗಂಭೀರ ಘಟನೆಗಳ ಜರುಗಿದಾಗ ವಾಟ್ಸಾಪ್, ಫೇಸ್ ಬುಕ್, ಟ್ವೀಟರ್ ನಲ್ಲಿ ಪ್ರಚೋದನಾಕಾರಿ ಸಂದೇಶಗಳನ್ನು ಹರಿ ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಇಂತಹ ಶಕ್ತಿಗಳನ್ನು ಮಟ್ಟ ಹಾಕಬೇಕು.
ದುಷ್ಟ ಸಂಹಾರ, ದೀಪಕ್ ದೇವಯ್ಯ, ಅರ್ಪಿತಾ ಭಟ್, ಅಬ್ದುಲ್ಲಾ ಮಂಗಳೂರ್ ಎಂಬ ಖಾತೆಗಳಿಂದ ವಿಕೃತ ಪೋಸ್ಟ್ ಗಳು ಹರಿದಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


