ರಾಜ್ಯ

ಮಂಡ್ಯ: ಅಂಬರೀಷ್ ಸಾವಿನಿಂದ ಆಘಾತ; ರೈಲಿಗೆ ತಲೆಕೊಟ್ಟು ಅಭಿಮಾನಿ ಆತ್ಮಹತ್ಯೆ

ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಾವಿನ ಸುದ್ದಿ ತಿಳಿದು ಅವರ ಅಪ್ಪಟ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯ: ಅಂಬರೀಷ್ ಸಾವಿನಿಂದ ಆಘಾತ; ರೈಲಿಗೆ ತಲೆಕೊಟ್ಟು ಅಭಿಮಾನಿ ಆತ್ಮಹತ್ಯೆ
ಅಂಬರೀಷ್
Published On :
ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಾವಿನ ಸುದ್ದಿ ತಿಳಿದು ಅವರ ಅಪ್ಪಟ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹೊಟ್ಟೆ ಗೌಡನದೊಡ್ಡಿ ಗ್ರಾಮದ ತಮ್ಮಯ್ಯ(50) ನಿಡಘಟ್ಟ ಸಮೀಪದ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಂಬರೀಷ್ ಸಾವಿನ ಸುದ್ದಿ ಕೇಳಿ ವಿಚಲಿತರಾಗಿದ್ದರು. ತಮ್ಮಯ್ಯ ಕೈಯ್ಯಲ್ಲಿ ಅಂಬರೀಷ್ ಭಾವಚಿತ್ಪ ಹಿಡಿದು,ರೈಲು ಹಳಿ ಮೇಲೆ ಶವ ಸಿಕ್ಕಿದೆ, 
ರೈತನಾಗಿದ್ದ ತಮ್ಮಯ್ಯ ಅಂಬರೀಷ್ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಅಂಬಿ ಟೀಮ್ ಎಂಬ ಹೆಸರಿನಲ್ಲಿ ಪ್ರತಿ ವರ್ಷ ಅಂಬರೀಷ್ ಅವರ ಹುಟ್ಟು ಹಬ್ಬ ಆಚರಿಸುತ್ತಿದ್ದರು. ಅಂಬರೀಶ್ ಸಾವಿನ ವಿಷಯ ಕೇಳಿದ ತಮ್ಮಯ್ಯ ವಿಚಿತ್ರವಾಗಿ ವರ್ತಿಸುತ್ತಿದ್ದರು. ಶನಿವಾರ ರಾತ್ರಿ ತಮ್ಮಯ್ಯ ಮನೆಗೆ ತೆರಳಿರಲಿಲ್ಲ, ಭಾನುವಾರ ಬೆಳಗ್ಗೆ 10.30ಕ್ಕೆ ಪ್ರಯಾಣಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ  ತಮ್ಮಯ್ಯ.ಅವರ ಕುಟುಂಬಸ್ಥರಿಗೆ ಸಿಎಂ ಕುಮಾರ ಸ್ವಾಮಿ ನೆರವು ನೀಡುವುದಾಗಿ ಘೋಷಿಸಿದ್ದಾರೆ ಎಂದು ತಾಲೂಕು ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಿ.ಟಿ ಶಂಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.