ಕಂಠೀರವ ಸ್ಟೇಡಿಯಂ ತಲುಪಿದ ಅಂಬಿ ಪಾರ್ಥೀವ ಶರೀರ: ಮೆರವಣಿಗೆಗೆ ಸಿದ್ಧತೆ
ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಹಿರಿಯ ನಟ ಅಂಬರೀಷ್ ಅವರ ಪಾರ್ಥೀವ ಶರೀರವನ್ನು ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತರಲಾಗಿದ್ದು, ಮೆರವಣಿಗೆಗೆ ಸಿದ್ಧತೆಗಳು..

Published On :
ಬೆಂಗಳೂರು: ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಹಿರಿಯ ನಟ ಅಂಬರೀಷ್ ಅವರ ಪಾರ್ಥೀವ ಶರೀರವನ್ನು ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತರಲಾಗಿದೆ.
ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಸಲು ಈಗಾಗಲೇ ನಿರ್ಧರಿಸಲಾಗಿದ್ದು, ವಿಶೇಷ ಆ್ಯಂಬುಲೆನ್ಸ್ ಮೂಲಕ ಇದೀಗ ಅಂಬರೀಷ್ ಅವರ ಪಾರ್ಥೀವ ಶರೀರವನ್ನು ಕಂಠೀವ ಸ್ಟುಡಿಯೋದತ್ತ ಕೊಂಡೊಯ್ಯಲಾಗುತ್ತಿದೆ.
ಈ ನಡುವೆ ಅಂತ್ಯಸಂಸ್ಕಾರ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಮೆರವಣಿಗೆ ಸುಮಾರು 13 ಕಿಲೋಮೀಟಲ್ ಸಾಗದಲಿದ್ದು, ಈ ಹಿನ್ನಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಹಿನ್ನಲೆಯಲ್ಲಿ ಅಂತ್ಯ ಸರ್ಕಾರ ಮುಂದೂಡುವ ಸಾಧ್ಯತೆಗಳಿವೆ ಎಂದು ವರದಿಗಳಿಂದ ತಿಳಿದುಬಂದಿದೆ.
ಅಂಬರೀಷ್ ಅವರ ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂ ತಲುಪಿದ ಬಳಿಕ 12 ಗಂಟೆಗೆ ಕ್ರೀಡಾಂಗಣದಿಂದ ಯಾತ್ರೆಗೆ ಹೊರಡಲಿದೆ.
ಮೈಸೂರು ಬ್ಯಾಂಕ್ ಸರ್ಕಲ್, ಪ್ಯಾಲೆಸ್ ರಸ್ತೆ, ವಿಂಡ್ಸರ್ ಮ್ಯಾನರ್ ಜಂಕ್ಷನ್, ಆರ್'ಎಂಸಿ ಯಾರ್ಡ್, ಗೊರಗುಂಟೆ ಪಾಳ್ಯ ಸೇರಿದಂತೆ ಸುಮಾರು 13 ಕಿ.ಮೀ ಮೆರವಣಿಗೆ ಮೂಲಕ ಮಧ್ಯಾಹ್ನ 3 ಗಂಟೆಗೆ ಪಾರ್ಥೀವ ಶರೀರ ಕಂಠೀರವ ಸ್ಟುಡಿಯೋಗೆ ಕರೆ ತಲಾರಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಮಂಡ್ಯMandyaHALಮೆರವಣಿಗೆಹೆಚ್ಎಎಲ್Army helicopterಸೇನಾ ಹೆಲಿಕಾಪ್ಟರ್Ambareesh Deathಅಬರೀಷ್ ನಿಧನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


