ಬೆಂಗಳೂರು: ದೇವನಹಳ್ಳಿ ಬಳಿ ಭೀಕರ ಅಪಘಾತ, ಇಬ್ಬರು ಸಾವು
ಬೆಂಗಳೂರಿನ ದೇವನಹಳ್ಳಿ ಬಳಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ....

Published On :
ಬೆಂಗಳೂರು: ಬೆಂಗಳೂರಿನ ದೇವನಹಳ್ಳಿ ಬಳಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ.
ವಿಮಾನ ನಿಲ್ದಾಣ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗುರುತು ಸಿಗದ ಸ್ಥಿತಿಯಲ್ಲಿರುವ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


