ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಸ್ಮಾರಕ ನಿರ್ಮಾಣ: ಹೆಚ್. ಡಿ. ಕುಮಾರಸ್ವಾಮಿ
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಪಕ್ಕ ರೆಬೆಲ್ ಸ್ಟಾರ್ ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಪಕ್ಕ ರೆಬೆಲ್ ಸ್ಟಾರ್ ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಅಂಬರೀಷ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದು, ಸಮಾಜದ ಎಲ್ಲಾ ವರ್ಗಗಳ ಪ್ರೀತಿಗೆ ಪಾತ್ರರಾಗಿದ್ದರು ಎಂದು ಕುಮಾರಸ್ವಾಮಿ ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ರಾಜ್ ಕುಮಾರ್ ಅವರ ಕನಸಾಗಿದ್ದ ಕಲಾಭವನನ್ನು ಅಂಬರೀಷ್ ಪೂರ್ಣಗೊಳಿಸಿದ್ದಾರೆ. ರಾಜ್ಯವನ್ನು ಅಗಲಿದ ನಟನಿಗೆ ಗೌರವ ನೀಡಬೇಕಾದದ್ದು ನಮ್ಮ ಪ್ರಾಥಮಿಕ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಅಂಬರೀಷ್ ಸ್ಮಾರಕ ನಿರ್ಮಾಣ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


