ಕೋಲಾರ: ಮನೆಯವ್ರು ನಮ್ಮ ಪ್ರೀತಿನ ಒಪ್ಪಿಕೊಳ್ಳಲಿಲ್ಲ ಎಂದು ರೈಲಿಗೆ ತಲೆಕೊಟ್ಟ ಪ್ರೇಮಿಗಳು!
ಮನೆಯವರು ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಬಂಗಾರಪೇಟೆ ಗಡಿ ಭಾಗದಲ್ಲಿ ನಡೆದಿದೆ.

Published On :
ಕೋಲಾರ: ಮನೆಯವರು ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಬಂಗಾರಪೇಟೆ ಗಡಿ ಭಾಗದಲ್ಲಿ ನಡೆದಿದೆ.
ಬಂಗಾರಪೇಟೆ ಕರ್ನಾಟಕ-ಆಂಧ್ರ ಗಡಿ ಭಾಗದ ಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಶರಣಾದವರನ್ನು ಜಿ.ಎಸ್ ಮೌನಿಷಾ ಹಾಗೂ ಹಿಮಚಂದ್ರ ಎಂದು ಗುರುತಿಸಲಾಗಿದ್ದು ಇಬ್ಬರೂ ಮಿಳುನಾಡಿನ ತಿರುವೆಲ್ಲೂರು ನಿವಾಸಿಗಳು ಎನ್ನಲಾಗಿದೆ. ಈ ಇಬ್ಬರೂ ಕುಪ್ಪಂನ ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಬಿಎಸ್‍ಸಿ ಓದುತ್ತಿದ್ದರು.
ಕೆಲ ವರ್ಷಗಳಿಂದಲೂ ಮೌನಿಷಾ ಹಾಗೂ ಹಿಮಚಂದ್ರ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಮನೆಯಲ್ಲಿಯೂ ಈ ಪ್ರೀತಿಗೆ ವಿರೋಧವಿತ್ತು.ಇದರಿಂದ ಬೇಸತ್ತ ಪ್ರೇಮಿಗಳು ಇಂದು ಬೆಳಿಗ್ಗೆ ಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಕುಪ್ಪಂ ರೈಲ್ವೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


