ರಾಜ್ಯ

ಮೇಕೆದಾಟು ವಿಚಾರ ಸಂಬಂಧ ತಮಿಳುನಾಡು ರಾಜ್ಯದೊಂದಿಗೆ ಮಾತನಾಡಲು ಸಿದ್ಧ: ಸಿಎಂ ಕುಮಾರಸ್ವಾಮಿ

ವಿವಾದಿತ ಮೇಕೆದಾಟು ಯೋಜನೆ ಸಂಬಂಧ ನೆರೆರಾಜ್ಯ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಮೇಕೆದಾಟು ವಿಚಾರ ಸಂಬಂಧ ತಮಿಳುನಾಡು ರಾಜ್ಯದೊಂದಿಗೆ ಮಾತನಾಡಲು ಸಿದ್ಧ: ಸಿಎಂ ಕುಮಾರಸ್ವಾಮಿ
ಸಿಎಂ ಕುಮಾರಸ್ವಾಮಿ
Published On :
ಹಾಸನ: ವಿವಾದಿತ ಮೇಕೆದಾಟು ಯೋಜನೆ ಸಂಬಂಧ ನೆರೆರಾಜ್ಯ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಾನವೀಯತೆ ಆಧಾರದ ಮೇಲೆ ಎರಡು ರಾಜ್ಯಗಳ ಜನರ ಹಿತಾಸಕ್ತಿಗೆ ಆದ್ಯತೆಯನ್ನು ನೀಡಿ ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ರಾಜ್ಯದೊಂದಿಗೆ ಮಾತುಕತೆ ನಡೆಸಲು ಸಿದ್ಧರಿದ್ದೇವೆಂದು ಹೇಳಿದ್ದಾರೆ. 
ಕೇಂದ್ರ ನೀರಾವರಿ ಸಂಪನ್ಮೂಲ ಸಚಿವರು ನೀಡಿರುವ ನಿರ್ದೇಶನಗಳಂತೆ ಮೇಕೆದಾಟು ಯೋಜನೆ ಸಂಬಂಧ ಸರ್ಕಾರ ಡಿಪಿಆರ್ ಸಿದ್ಧಪಡಿಸುತ್ತಿದೆ ಎಂದದು ತಿಳಿಸಿದ್ದಾರೆ. 
ಕೇಂದ್ರ ಸಚಿವಾಲಯದ ನಿರ್ಧಾರಗಳಿಗೆ ಅನುಸಾರ ಕೇಂದ್ರವು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದ್ದು, ಯೋಜನೆಯ ವೆಚ್ಚ ಭರಿಸುವಂತೆ ತಿಳಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿ ಇತರೆ ವಿರೋಧ ಪಕ್ಷಗಳು ಈ ವಿಚಾರವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಬಾರದು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.