ಮಹದೇಶ್ವರ ಬೆಟ್ಟದಲ್ಲಿ ನೈರ್ಮಲ್ಯ ಯೋಜನೆ ಜಾರಿಗೆ ಮುಖ್ಯಮಂತ್ರಿ ಬಳಿ ಪರಿಸರ ಪ್ರೇಮಿಗಳ ಮನವಿ
ಗಡಿ ಜಿಲ್ಲೆ ಚಾಮರಾಜನಗರದ ಮಲೈ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ನೈರ್ಮಲ್ಯ ಯೋಜನೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಬಳಿ ಪರಿಸರ ಪ್ರೇಮಿಗಳು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಗಡಿ ಜಿಲ್ಲೆ ಚಾಮರಾಜನಗರದ ಮಲೈ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ನೈರ್ಮಲ್ಯ ಯೋಜನೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಬಳಿ ಪರಿಸರ ಪ್ರೇಮಿಗಳು ಮನವಿ ಮಾಡಿಕೊಂಡಿದ್ದಾರೆ.
ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಅಗತ್ಯತೆಗಾಗಿ ಸಂಬಂಧಿತ ಪ್ರಾಧಿಕಾರಕ್ಕೆ ಹಲವು ಬಾರಿ ಪತ್ರ ಬರೆದಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.
2016ರಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕಾಗಿ ಮಲೈ ಮಹದೇಶ್ವರ ದೇವಾಲಯ ಅಭಿವೃದ್ದಿ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾಗಿದೆ. ಆದರೆ, ಈ ಯೋಜನೆ ನಿರ್ಲಕ್ಷಿಸಲಾಗಿದ್ದು, ಕುಡಿಯುವ ನೀರಿನ ಮೂಲಗಳು ಕಲುಷಿತಗೊಂಡಿದ್ದು, ಜನರು ಹಾಗೂ ವನ್ಯಜೀವಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಯೋಜನೆ ಪೂರ್ಣಗೊಳಿಸುವಂತೆ ಸಂಸದ ಧ್ರುವನಾರಾಯಣ್ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದಾರೆ.
ರಾಜ್ಯಕ್ಕೆ ಅತಿ ಹೆಚ್ಚಿನ ಆದಾಯ ತಂದುಕೊಟ್ಟುವ ದೇವಾಲಯಗಳಲ್ಲಿ ಮಲೈ ಮಹದೇಶ್ವರ ದೇವಾಲಯವೂ ಒಂದಾಗಿದೆ. ತ್ಯಾಜ್ಯ ಹಾಗೂ ಪ್ಲಾಸ್ಟಿಕ್ ತುಂಬಿಕೊಂಡು ಕುಡಿಯುವ ನೀರು ಕಲುಷಿತಗೊಂಡಿದೆ. ಇಂತಹ ನೀರನ್ನೆ ಭಕ್ತಾಧಿಗಳು ಕುಡಿಯಬೇಕಾಗಿದೆ. ಇಲ್ಲಿ ಹರಿಯುವ ತ್ಯಾಜ್ಯ ನೀರು ಕೂಡಾ ಕಾವೇರಿ ನೀರಿಗೆ ಹರಿಯುತ್ತಿದೆ ಎಂದು ಹೋರಾಟಗಾರರು ಹೇಳಿದ್ದಾರೆ.
ಮಹದೇಶ್ವರ ದೇವಾಲಯಕ್ಕೆ ಬರುವ ಅಸಂಖ್ಯಾತ ಭಕ್ತಾಧಿಗಳು ಅಂತರಗಂಗೆಯಲ್ಲಿ ಮುಳುಗುತ್ತಾರೆ. ಅಂತರಗಂಗೆಯಲ್ಲಿ ಅನೇಕ ತ್ಯಾಜ್ಯ ಸೇರಿಕೊಂಡು ಕಲುಷಿತಗೊಂಡಿದೆ. ಆದಾಗ್ಯೂ, ಪ್ರಾಧಿಕಾರ ತ್ಯಾಜ್ಯ ನಿರ್ವಹಣಾ ಘಟಕವನ್ನು ಸ್ಥಾಪಿಸಿಲ್ಲ ಎಂದು ಹನೂರಿನ ನಿವಾಸಿ ಕೃಷ್ಣಮೂರ್ತಿ ಹೇಳುತ್ತಾರೆ.
ಪರಿಸರ ಸೂಕ್ಷ್ಮ ವಲಯದಲ್ಲಿ ದೇವಾಲಯ ಇದ್ದು, ಅಂತರಗಂಗೆಯಲ್ಲಿನ ತ್ಯಾಜ್ಯ ನೀರು ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಸಂಸ್ಕರಿಸಲು ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಅಗತ್ಯವಿದೆ ಎಂದು ಮಲೈ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಎಡುಕೊಂಡಲು ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


