ರಾಜ್ಯ

ರಾಯಚೂರು: ಶವಸಂಸ್ಕಾರಕ್ಕೆ ತೆರಳುವಾಗ ಟ್ರಾಕ್ಟರ್ ಪಲ್ಟಿ, ಇಬ್ಬರು ಸಾವು 26 ಜನರಿಗೆ ಗಾಯ

ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು 26 ಜನರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು: ಶವಸಂಸ್ಕಾರಕ್ಕೆ ತೆರಳುವಾಗ ಟ್ರಾಕ್ಟರ್ ಪಲ್ಟಿ, ಇಬ್ಬರು ಸಾವು 26 ಜನರಿಗೆ ಗಾಯ
ಶವಸಂಸ್ಕಾರಕ್ಕೆ ತೆರಳುವಾಗ ಟ್ರಾಕ್ಟರ್ ಪಲ್ಟಿ
Published On :
ರಾಯಚೂರು: ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು 26  ಜನರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಕಿನ್ನಾರಿಕ್ರಾಸ್ ಸಮೀಪ ನಡೆದ ದುರ್ಘಟನೆಯಲ್ಲಿ ಲಕ್ಕಮ್ಮ ವಿರೂಪಾಪುರ (65) ಹಾಗೂ ಬಸವರಾಜ ಸುಕಾಲಪೇಟೆ (60)  ಎನ್ನುವವರು ಸಾವನ್ನಪ್ಪಿದ್ದಾರೆ.
ವಿರೂಪಾಪುರದಿಂದ ಶವಸಂಸ್ಕಾರಕ್ಕಾಗಿ ದಢೇಸೂಗುರಿಗೆ  ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ 26 ಮಂದಿಗೆ ಗಾಯಗಳಾಗಿದೆ.
ಗಾಯಾಳುಗಳನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಪೈಕಿ ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಘಟನೆ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.