ಬೇಜವಾಬ್ದಾರಿಯುತ ಸಂದೇಶ ಕಳುಹಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು !
ಗುಂಪು ಹಲ್ಲೆಯಂತಹ ಘಟನೆ ತಡೆಗಟ್ಟುವ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ನಿರ್ದೇಶನದ ಅನುಸಾರದಂತೆ ರಾಜ್ಯ ಪೊಲೀಸ್ ಇಲಾಖೆ ಆದೇಶವೊಂದು ಹೊರಡಿಸಿದೆ.

ಬೆಂಗಳೂರು: ಗುಂಪು ಹಲ್ಲೆಯಂತಹ ಘಟನೆ ತಡೆಗಟ್ಟುವ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ನಿರ್ದೇಶನದ ಅನುಸಾರದಂತೆ ರಾಜ್ಯ ಪೊಲೀಸ್ ಇಲಾಖೆ ಆದೇಶವೊಂದು ಹೊರಡಿಸಿದೆ.
ಈ ಆದೇಶದ ಪ್ರಕಾರ, ಗುಂಪು ಹಲ್ಲೆಗೆ ಪ್ರಚೋದಿಸುವಂತಹ ಬೇಜವಾಬ್ದಾರಿಯುತ ಸಂದೇಶ ಕಳುಹಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬಹುದಾಗಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಈ ಆದೇಶ ಹೊರಡಿಸಿದ್ದು, ದ್ವೇಷ ಹರಡುವಂತಹ ಅಥವಾ ಗುಂಪು ಹಲ್ಲೆಗೆ ಪ್ರಚೋದನೆ ನೀಡುವಂತಹ ವರದಿ ಬಗ್ಗೆ ನಿಗಾ ಇಡಲು ವಿಶೇಷ ಕಾರ್ಯ ಪಡೆ ರಚಿಸುವಂತೆ ಸ್ಥಾಪಿಸುವಂತೆ ನೊಡಲ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅಲ್ಲದೇ ಎರಡು ವಾರಗಳೊಳಗೆ ಇಂತಹ ಘಟನೆಗಳು ನಡೆದ ಪ್ರದೇಶವನ್ನು ಪತ್ತೆಹಚ್ಚುವಂತೆ ಸೂಚಿಸಲಾಗಿದೆ.
ಸಮಾಜ ವಿರೋಧಿಗಳು ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಹಾಗೂ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುವಂತೆ ಹೇಳಲಾಗಿದೆ. ಇಂತಹ ಘಟನೆಗಳ ವಿಚಾರಣೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸುವಂತೆ ಹಾಗೂ ಸಂತ್ರಸ್ತರ ಕುಟುಂಬ ಸದಸ್ಯರ ಮೇಲೆ ದೌರ್ಜನ್ಯ ನಡೆಯದಂತೆ ನೋಡಲ್ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


