ಬಿಎಂಟಿಸಿ ಬಸ್'ನಲ್ಲಿ: ಆಪತ್ಭಾಂಧವನಂತೆ ಪ್ರಯಾಣಿಕರ ಜೀವ ರಕ್ಷಿಸಿದ ಚಾಲಕ
ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಯಾಣಿಕರು ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲದಲ್ಲಿ ಸೋಮವಾರ ನಡೆದಿದೆ...

Published On :
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಯಾಣಿಕರು ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲದಲ್ಲಿ ಸೋಮವಾರ ನಡೆದಿದೆ.
ನಗರದ ಎಂ.ಜಿ ರಸ್ತೆಯಿಂದ ಮಾದನಾಯಕನಹಳ್ಳಿಯ ಕಡೆಗೆ ಬಸ್ ಬರುತ್ತಿತ್ತು. ಈ ವೇಳೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬಸ್ ನಲ್ಲಿ ಒಟ್ಟು 12 ಮಂದಿ ಪ್ರಯಾಣಿಕರಿದ್ದರು. ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಚಾಲಕ ಮಹದೇವಯ್ಯ ಕೂಡಲೇ ಬಸ್ ನಿಲ್ಲಿಸಿ ಕೆಳಗೆ ಇಳಿದಿದ್ದಾನೆ. ಬೆಂಕಿ ಕೆನ್ನಾಲಿಗೆ ಬಸ್ ಸುತ್ತಲೂ ಆವರಿಸಿಕೊಳ್ಳುವುದಕ್ಕೂ ಮುನ್ನವೇ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.
ಬಳಿಕ ಚಾಲಕನ ನೆರವಿಗೆ ಬಂದಿರುವ ಸ್ಥಳೀಯರು ಬೆಂಕಿ ಮುಂದಾಗಿದ್ದಾರೆ. ಎಂಜಿನ್ ನಲ್ಲಿ ಹೊತ್ತಿಕೊಂಡಿದ್ದ ಬೆಂಕಿ, ಇಡೀ ಬಸ್ ಆವರಿಸುವ ಸಾಧ್ಯತೆಗಳಿತ್ತು. ಅದೃಷ್ಯವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.
ರಸ್ತೆಯಲ್ಲಿ ಬಸ್ ನಿಂತಿದ್ದರಿಂದಾಗಿ ಕೆಲ ಕಾಲ ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನೆ ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


