ಬೇಲೆಕೇರಿ ಪ್ರಕರಣ: ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಕೋರ್ಟ್ ಬುಧವಾರ...

Published On :
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಕೋರ್ಟ್ ಬುಧವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಅದಿರು ನಾಪತ್ತೆ ಪ್ರಕರಣದ ವಿಚಾರಣೆಗೆ ಸತತ ಗೈರಾಗಿದ್ದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಆನಂದ್ ಸಿಂಗ್ ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದು, ತಕ್ಷಣ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಕೋರ್ಟ್ ಆದೇಶದಿಂದಾಗಿ ಶಾಸಕ ಆನಂದ್ ಸಿಂಗ್ ಹಾಗೂ ಶಾಸಕ ನಾಗೇಂದ್ರ ಬಂಧನದ ಭೀತಿಯಲ್ಲಿದ್ದಾರೆ.
ಇನ್ನು ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನಾಗೇಂದ್ರ ಅವರು, ಕೋರ್ಟ್ ವಾರಂಟ್ ಬಗ್ಗೆ ಗೊತ್ತಾಗಿದೆ. ವಾರಂಟ್ ಹಿಂಪಡೆಯುವಂತೆ ಕೋರಿ ನಾಳೆ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
non-bailable warrantಕಾಂಗ್ರೆಸ್ ಶಾಸಕರುbelekeri scamCongress MLAsಜಾಮೀನು ರಹಿತ ಬಂಧನ ವಾರಂಟ್ಬೇಲೆಕೇರಿ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


