ಮತ್ತೆ ರಾಮಚಂದ್ರಾಪುರ ಮಠದ ತೆಕ್ಕೆಗೆ ಗೋಕರ್ಣ: ಸುಪ್ರೀಂ ತೀರ್ಪು
ಪ್ರಸಿದ್ದ ಯಾತ್ರಾ ಸ್ಥಳ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ತನ್ನ ಮುಂದಿನ ಆದೇಶದವರೆಗೆ ರಾಮಚಂದ್ರಾಪುರ ಮಠಕ್ಕೆ ಸೇರಿರಲಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ತೀರ್ಪು ನೀಡಿದೆ.

Published On :
ನವದೆಹಲಿ: ಪ್ರಸಿದ್ದ ಯಾತ್ರಾ ಸ್ಥಳ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ತನ್ನ ಮುಂದಿನ ಆದೇಶದವರೆಗೆ ರಾಮಚಂದ್ರಾಪುರ ಮಠಕ್ಕೆ ಸೇರಿರಲಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಎ.ಎಂ. ಖನ್ವಿಲ್ಕರ್ ಅವರನ್ನೊಳಗೊಂದ ದ್ವಿಸದಸ್ಯ ಪೀಠ ಈ ಆದೇಶ ನಿಡಿದೆ. ಇದಕ್ಕೆ ಮುನ್ನ ಸೆಪ್ಟೆಂಬರ್ 7ರಂದು ನಡೆದ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿತ್ತು. ಆದರೆ ಇದೀಗ ಮಠದ ವಶದಲ್ಲೇ ದೇವಾಲಯ ಇರಲಿ ಎನುವ ಮೂಲಕ ಜಿಲ್ಲಾಧಿಕಾರಿ ನೇತೃತ್ವದಲ್ಲಿ ದೇವಸ್ಥಾನ ಆಡಳಿತ ನಡೆಸಲು ರಚಿಸಲಾಗಿದ್ದ ಸಮಿತಿಯನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಅಲ್ಲದೆ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವ ಮುನ್ನ ಇದ್ದ ಪೂಜಾ ಕೈಂಕರ್ಯ ಪದ್ದತಿ ಸೇರಿ ಆಡಳಿತ ಸಂಬಂಧಿ ಮಾಹಿತಿಯನ್ನು ತಮಗೆ ಒದಗಿಸಬೇಕು ಎಂದು ರಾಜ್ಯ ಸರ್ಕಾರ, ರಾಮಚಂದ್ರಾಪುರ ಮಠ ಹಾಗೂ ದೇವಸ್ಥಾನದ ವಿಶ್ವಸ್ಥ ಮಂಡಲಿಗೆ ನ್ಯಾಯಾಲಯ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ ನಲ್ಲಿ ನಡೆಯಲಿದ್ದು "ಯಥಾ ಸ್ಥಿತಿ" ಕಾಪಾಡಿಕೊಳ್ಳುವ ಆದೇಶವಿರುವ ಕಾರಣ ನ್ಯಾಯಾಂಗ ನಿಂದನೆ ಪ್ರಶ್ನೆ ಉದ್ಭವಿಸಲಾರದು ಎಂದೂ ಪೀಠ ಸ್ಪಷ್ಟನೆ ನೀಡಿದೆ.
ಗೋಕರ್ಣ ದೇವಸ್ಥಾನವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎನ್ನುವ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಮಚಂದ್ರಾಪುರ ಮಠ ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿತ್ತು.ಇತ್ತೀಚೆಗೆ ಹೈಕೋರ್ಟ್ ನೀಡಿದ್ದ ತೀರ್ಪಿನ ಅನುಸಾರ ೨೦೦೮ರಲ್ಲಿ ದೇವಸ್ಥಾನದ ಆಡಳಿತ ವಹಿಸಿಕೊಂಡಿದ್ದ ರಾಮಚಂದ್ರಾಪುರ ಮಠದಿಂದ ಮತ್ತೆ ಸರ್ಕಾರದ ವಶಕ್ಕೆ ಕೊಡಲ್ಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


