ರಾಜ್ಯ

ತುಮಕೂರು: ಮಾಜಿ ಮೇಯರ್ ಹತ್ಯೆ ಪ್ರಕರಣ ಮಾಸ್ಟರ್ ಮೈಂಡ್ ಪೊಲೀಸರಿಗೆ ಶರಣು

ತುಮಕೂರಿನ ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ರ್ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ ಹಾಗೂ ಆತನ ಸಹಚರರು ...

ತುಮಕೂರು: ಮಾಜಿ ಮೇಯರ್ ಹತ್ಯೆ ಪ್ರಕರಣ ಮಾಸ್ಟರ್ ಮೈಂಡ್ ಪೊಲೀಸರಿಗೆ ಶರಣು
ಪತ್ರಕರ್ತ ಅಗ್ನಿ ಶ್ರಿಧರ್ ಜೊತೆ ಆರೋಪಿ ಸುಜಿ(ಸಂಗ್ರಹ ಚಿತ್ರ)
Published On :
ತುಮಕೂರು: ತುಮಕೂರಿನ ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ರ್ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ ಹಾಗೂ ಆತನ ಸಹಚರರು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.
ಭಾನುವಾರ ಹತ್ಯೆ ಮಾಡಿದ ಬಳಿಕ ಆರೋಪಿಗಳು ಆಂಧ್ರ ಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದರು. ಆರೋಪಿಗಳು ಶರಣಾಗುವಲ್ಲಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರು ಸಹಾಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಮಾಜಿ ರೌಡಿ ಹಾಗೂ ಪತ್ರಕರ್ತ ಅಗ್ನಿ ಶ್ರೀಧರ್ ಕರುನಾಡ ಸೇನೆ ಸಂಘಟನೆ ಪುನರ್ ಸ್ಥಾಪಿಸುವ ವೇಳೆ ಸುಜಿ ಮುಂದಾಳತ್ವ ವಹಿಸಿದ್ದ.
ಆರೋಪಿಗಳು ಶರಣಾಗಿರುವ ವಿಷಯವನ್ನು ಎಸ್ ಪಿ ದಿವ್ಯಾ ವಿ. ಗೋಪಿನಾಥ್ ದೃಢ ಪಡಿಸಿದ್ದಾರೆ, ಈತನೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿರಬಹುದು ಎಂದು ಶಂಕಿಸಲಾಗಿದೆ, ಆದರೆ ಘಟನೆ ನಡೆದ ಸ್ಥಳದಲ್ಲಿ ಆತ ಇರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.