ಬಿಡಿಎ ಎಂಜಿನೀಯರ್ ಎನ್.ಜಿ.ಗೌಡಯ್ಯ, ಕೆಐಎಡಿಬಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಕೋಟ್ಯಾಂತರ ರೂ. ಹಣ ಜಪ್ತಿ
:ಬೆಳ್ಳಂಬೆಳಗ್ಗೆ ಎಸಿಬಿ ತಂಡ ಕೆಐಎಡಿಬಿ ಮತ್ತು ಬಿಡಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿದೆ....

Published On :
ಬೆಂಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ತಂಡ ಕೆಐಎಡಿಬಿ ಮತ್ತು ಬಿಡಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿದೆ.
ಮಲ್ಲೇಶ್ವರಂನಲ್ಲಿರುವ ಕೆಐಎಡಿಬಿ ಮುಖ್ಯ ಎಂಜಿನಿಯರ್ ಟಿ.ಆರ್.ಸ್ವಾಮಿ ಮನೆ ಮೇಲೆ ದಾಳಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲ್ಯಾಟ್ ಮೇಲೂ ದಾಳಿಯನ್ನು ಮಾಡಲಾಗಿದೆ. ದಾಳಿ ವೇಳೆ 10 ಕೋಟಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ.
ಟಿ.ಆರ್.ಸ್ವಾಮಿ ಅವರು ಎಸಿಬಿ ಅಧಿಕಾರಿಗಳನ್ನು ಕಂಡು ದಂಗಾಗಿ ಕಂತೆ ಕಂತೆ ನೋಟುಗಳನ್ನು ಕಿಟಕಿಯ ಹೊರಗಡೆಯಿಂದ ಎಸೆದಿದ್ದಾರೆ ಎಂದು ಹೇಳಲಾಗಿದೆ.
ಬಸವೇಶ್ವರನಗರದಲ್ಲಿರುವ ಬಿಡಿಎ ಅಧೀಕ್ಷಕ ಅಭಿಯಂತರ ಎನ್.ಜಿ. ಗೌಡಯ್ಯ ಅವರ ಮನೆ ಮೇಲೆ ದಾಳಿ ಮಾಡಲಾಗಿದ್ದು, ದಾಳಿ ವೇಳೆ ಯಾವುದೇ ರೀತಿಯ ಹಣ, ಚಿನ್ನ ಪತ್ತೆಯಾಗಿಲ್ಲ. ಬೇನಾಮಿ ಆಸ್ತಿ ಪತ್ರ ಸಿಕ್ಕಿದ್ದು, ಮೂಲ ದಾಖಲಾತಿಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಗೌಡಯ್ಯ ತನ್ನ ಕಾರಿನ ಡ್ರೈವರ್ ಗೂ ಸಹ ಮನೆ ತೋರಿಸಿರಲಿಲ್ಲ. ಇವರು ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


