ರಾಜ್ಯ

ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಿಎಂ ಸೇರಿ ಗಣ್ಯರ ಸಂತಾಪ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪ ಮೇಯರ್ ರಮೀಳಾ ಉಮಾಶಂಕರ್ ...

ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಿಎಂ ಸೇರಿ ಗಣ್ಯರ ಸಂತಾಪ
ನಮ್ಮ ಮೆಟ್ರೊ ಕಾರ್ಯಕ್ರಮದಲ್ಲಿ ಗುರುವಾರ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಇತರರೊಂದಿಗೆ ಉಪ ಮೇಯರ್ ರಮೀಳಾ ಉಮಾಶಂಕರ್
Published On :

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪ ಮೇಯರ್ ರಮೀಳಾ ಉಮಾಶಂಕರ್ ಅವರ ಆಕಸ್ಮಿಕ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.

ನಿನ್ನೆಯಷ್ಟೇ 'ನಮ್ಮ ಮಟ್ರೊ' ಕಾರ್ಯಕ್ರಮದಲ್ಲಿ ನಮ್ಮ ಜೊತೆ ಭಾಗವಹಿಸಿ ದಿನವಿಡೀ ಲವಲವಿಕೆಯಿಂದ ಇದ್ದ ರಮೀಳಾ ಅವರು ಇಂದು ಇಲ್ಲವಾಗಿರುವುದು ತೀವ್ರ ಆಘಾತ ಮತ್ತು ನೋವು ತಂದಿದೆ ಎಂದು ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.

ನಿಧನದ ಸುದ್ದಿ ಕೇಳುತ್ತಿದ್ದಂತೆ ಅವರ ಕುಟುಂಬ ಸದಸ್ಯರಿಗೆ  ಸಿಎಂ ಕುಮಾರಸ್ವಾಮಿ ಕರೆ ಮಾಡಿ ಸಾಂತ್ವನ ಹೇಳಿದರು. ಪೂರ್ವ ನಿಯೋಜಿತ ಕಾರ್ಯಕ್ರಮವಿರುವುದರಿಂದ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.