ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ಹಠಾತ್ ನಿಧನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಆಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್(44 ವರ್ಷ) ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನ ಹೊಂದಿದ್ದಾರೆ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಆಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್(44 ವರ್ಷ) ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನ ಹೊಂದಿದ್ದಾರೆ.
ಕಳೆದ ರಾತ್ರಿ 12.50ರಲ್ಲಿ ರಮೀಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಪಶ್ಚಿಮ ಕಾರ್ಡ್ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.
2015ರಲ್ಲಿ ನಡೆದಿದ್ದ ಬಿಬಿಎಂಪಿ ಚುನಾವಣೆಯಲ್ಲಿ ಗೋವಿಂದರಾಜನಗರದ ಕಾವೇರಿಪುರಂ ವಾರ್ಡ್ನಿಂದ (103) ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಮೀಳಾ ಅವರು ಜಯ ಸಾಧಿಸಿದ್ದರು. ಕಳೆದ ವಾರ ಸೆಪ್ಟೆಂಬರ್ 28ರಂದು ಬಿಬಿಎಂಪಿಯ ಉಪ ಮೇಯರ್ ಆಗಿ ಅವರು ಆಯ್ಕೆಯಾಗಿದ್ದರು.
ನಿನ್ನೆ ಬೆಳಗ್ಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ನಮ್ಮ ಮೆಟ್ರೋಗೆ ಭೇಟಿ ನೀಡಿದ್ದಾಗ, ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ನಿನ್ನೆ ಬೆಳಗ್ಗೆಯೇ ಕೆ.ಆರ್.ಮಾರುಕಟ್ಟೆ ಸುತ್ತಮುತ್ತ ಪರಿಶೀಲನೆಯಲ್ಲಿ ತೊಡಗಿದ್ದಾಗ ರಮೀಳಾ ಅವರೂ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಭಾಗವಹಿಸಿದ್ದರು. ಹೀಗೆ ದಿನವಿಡೀ ಲವಲವಿಕೆಯಿಂದಲೇ ಇದ್ದ ರಮೀಳಾ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ರಮೀಳಾ ಅವರ ಹಠಾತ್ ನಿಧನದಿಂದ ಕುಟುಂಬ ತೀವ್ರ ದುಃಖತಪ್ತವಾಗಿದೆ. ಅವರ ಬಂಧುಗಳು, ಸ್ನೇಹಿತರು, ರಾಜಕೀಯ ಮುಖಂಡರಿಗೆ ಸಹ ಈ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ಅವರ ಅಂತ್ಯಕ್ರಿಯೆ ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.
ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ವಿದ್ಯಾರ್ಹತೆ ಗಳಿಸಿದ್ದ ರಮೀಳಾ ಪತಿ ಹಾಗೂ ಇಬ್ಬರು ಮಕ್ಕಳಾದ ವರುಣ್ ಕುಮಾರ್ ಮತ್ತು ಭೂಮಿಕಾರನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


