ರಾಜ್ಯ

ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವಿವಿಧೆಡೆ ಎಸಿಬಿ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶನಿವಾರ ಬೆಳ್ಳಂಬೆಳಿಗ್ಗೆ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ...

ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವಿವಿಧೆಡೆ ಎಸಿಬಿ ದಾಳಿ
ಸಂಗ್ರಹ ಚಿತ್ರ
Published On :
ಬೆಳಗಾವಿ: ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶನಿವಾರ ಬೆಳ್ಳಂಬೆಳಿಗ್ಗೆ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 
ಖಾನಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಗೌಡ ಪಾಟೀಲ್ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. 
ಚಂದ್ರಗೌಡ ಪಾಟೀಲ್ ಅವರ ರಾಮತೀರ್ಥ ನಗರದ ನಿವಾಸ, ಬೈಲಹೊಂಗಲದ ನಿವಾಸ ಹಾಗೂ ಖಾನಾಪುರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ಬಾಗಲಕೋಟೆಯ ಗ್ರಾಮೀಣ ನೀರು ಸರಬರಾಜು ಉಪವಿಭಾಗದ ಎಇಇ ಚಿದಾನಂದ ಮಿಂಚಿನಾಳ ಅವರ ನಿವಾಸದ ಮೇಲೂ ಎಸಿಬಿ ದಾಳಿ ನಡೆಸಿದೆ. ಅಲ್ಲದೆ, ಮಿಂಚನಾಳಗೆ ಸೇರಿದ ವಿಜಯಪುರ ನಗರದ ಸಾಯಿ ಪಾರ್ಕ್ ನಲ್ಲಿರುವ ಎರಡು ನಿವಾಸದ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.