ರೂ.1128 ಕೋಟಿ ಬಾಕಿ ನೀಡಿ; ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕನಿಷ್ಠ ಬೆಂಬಲ ಬೆಲೆಯಡಿ ಇನ್ನೂ ರೂ.1,128 ಕೋಟಿ ಬರಬೇಕಿದ್ದು, ಕೂಡಲೇ ಆ ಹಣವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್...

Published On :
ನವದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕನಿಷ್ಠ ಬೆಂಬಲ ಬೆಲೆಯಡಿ ಇನ್ನೂ ರೂ.1,128 ಕೋಟಿ ಬರಬೇಕಿದ್ದು, ಕೂಡಲೇ ಆ ಹಣವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಬಳಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಮನವಿ ಮಾಡಿಕೊಂಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ನಿನ್ನೆಯಷ್ಟೇ ಪಾಸ್ವಾನ್ ಅವರನ್ನು ಭೇಟಿಯಾದ ಮುಖ್ಯಮಂತ್ರಿಗಳು, ಬಾಕಿ ಹಣ ಬಿಡುಗಡೆಗೆ ಅಗತ್ಯವಿರುವ ದಾಖಲೆಗಳನ್ನು ರಾಜ್ಯ ಸರ್ಕಾರ ಈಗಾಗಲೇ ಸಲ್ಲಿಕೆ ಮಾಡಿದೆ. ಆದ್ದರಿಂದ ತ್ವರಿತವಾಗಿ ಹಣ ಬಿಡುಗಡೆ ಮಾಡಿ. ಇಲ್ಲದೇ ಹೋದಲ್ಲಿ ಕನಿಷ್ಠ ಬೆಂಬಲ ಬೆಲೆಗಾಗಿರುವ ರಾಜ್ಯ ಆವರ್ತನ ನಿಧಿ ಮೇಲೆ ಹೊರೆಯಾಗಲಿದೆ ಎಂದು ಪಾಸ್ವಾನ್ ಅವರಿಗೆ ವಿವರಿಸಿದ್ದಾರೆ.
ಪಾಸ್ವಾನ್ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಸಮ್ಮಿಶ್ರ ಸರ್ಕಾರದಲ್ಲಿ ಆಡಳಿತ ನಡೆಸುವಾಗ ಯಾವಾಗಲೂ ಒತ್ತಡಗಳು ಇದ್ದೇ ಇರುತ್ತದೆ. ಆದರೆ, ನಮ್ಮ ಸರ್ಕಾರ ಸುಭದ್ರವಾಗಿದ್ದು, 5 ವರ್ಷ ಆಡಳಿತ ನಡೆಸಲಿದ್ದೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kumaraswamyಕುಮಾರಸ್ವಾಮಿKarnatakaಕರ್ನಾಟಕCentreಕೇಂದ್ರRam Vilas Paswanರಾಮ್ ವಿಲಾಸ್ ಪಾಸ್ವಾನ್ಬಾಕಿ ಮೊತ್ತPending claims
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


