ಸ್ನೇಹಿತನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಬಂಧನ
ಸ್ನೇಹಿತನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿ ನಂತರ ತನಗೇನೂ ಗೊತ್ತಿಲ್ಲ ಎಂಬಂತೆ ನಟಿಸಿದ ಕಾಮುಕನೊಬ್ಬ ಭಾರೀ ಹೈಡ್ರಾಮಾ ಮಾಡಿ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ...

Published On :
ವಿಜಯಪುರ: ಸ್ನೇಹಿತನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿ ನಂತರ ತನಗೇನೂ ಗೊತ್ತಿಲ್ಲ ಎಂಬಂತೆ ನಟಿಸಿದ ಕಾಮುಕನೊಬ್ಬ ಭಾರೀ ಹೈಡ್ರಾಮಾ ಮಾಡಿ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಚಿಮ್ಮಲಗಿ ತಾಂಡಾದ ಶಿವನಾಂದ ಚಂದು ಲಮಾಣಿ (35) ಬಂಧಿತ ಆರೋಪಿಯಾಗಿದ್ದಾನೆ.
ಚಿಮ್ಮಲಗಿ ತಾಂಡಾದಲ್ಲಿ ಸೆ.30 ರಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯವೆಸಗಿ, ಕೊಲೆ ಮಾಡಿರುವ ಪ್ರಕರಣವೊಂದು ದಾಖಲಾಗಿದೆ. ಇದರಂತೆ ಪರಿಶೀಲನೆ ನಡೆಸಿದ ಪೊಲೀಸರು ಗ್ರಾಮದ ಹೊರವಲಯದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಘಟನೆ ಕುರಿತಂತೆ ಕಾಮುಕನೇ ಹೈ ಡ್ರಾಮಾ ಮಾಡಿದ್ದಾನೆ. ಅತ್ಯಾಚಾರ ಆರೋಪಿಗಳನ್ನು ಬಂಧಿಸಿ ಸೆರೆಹಿಡಿಯುವಂತೆ ಗ್ರಾಮಸ್ಥರೊಂದಿಗೆ ಸೇರಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾನೆ.
ದೂರು ನೀಡಿದ್ದ ಬಾಲಕಿಯ ಪೋಷಕರು ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಾಲಕಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದರಿಂದ ದೇಹದ ಮೇಲಿನ ಗಾಯಗಳನ್ನು ಹುಡುಕುವಲ್ಲಿ ಪೊಲೀಸರು ವಿಫಲಾಗಿದ್ದರು. ಇದಾದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢವಾಗಿದೆ. ಗ್ರಾಮದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲದಿದ್ದರಿಂದ ಆರೋಪಿ ಹುಡುಕುವುದು ಪೊಲೀಸರಿಗೆ ಕಷ್ಟಸಾಧ್ಯವಾಗಿದೆ.
ತನಿಖೆ ವೇಳೆ ಬಾಲಕಿ ತಂದೆ ಭೂಮಿ ವಿಚಾರ ಸಂಬಂಧ ಸ್ನೇಹಿತನೊಬ್ಬನೊಂದಿಗೆ ವೈಷಮ್ಯ ಇಟ್ಟುಕೊಂಡಿದ್ದರು ಎಂಬುದು ಪೊಲೀಸರಿಗೆ ತಿಳಿದುಬಂದಿದೆ. ಬಳಿಕ ಪೊಲೀಸರು ಲಮಾಣಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ.
ಸೆ.29 ರಂದು ಘಟನೆ ನಡೆಸಿದ್ದು, 12 ವರ್ಷದ ಸಂತ್ರಸ್ತ ಬಾಲಕಿ ನಿಡ್ಗುಂಡಿಯಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ ಬಾಲಕಿಗೆ ಮಾರ್ಗದ ಮಧ್ಯೆ ಸಿಕ್ಕಿರುವ ಕಾಮುಕ ಲಮಾಣಿ ಮನೆಗೆ ಬಿಡುವುದಾಗಿ ಹೇಳಿ ದ್ವಿಚಕ್ರ ವಾಹನಕ್ಕೆ ಹತ್ತಿಸಿಕೊಂಡಿದ್ದಾರೆ. ಬಳಿಕ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಗೈದು, ಕೊಲೆ ಮಾಡಿದ್ದಾರೆ. ಬಳಿಕ ದಟ್ಟ ಅರಣ್ಯ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


