ಸಿಎಂ ಕುಮಾರಸ್ವಾಮಿ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ಪೌರ ಕಾರ್ಮಿಕರು
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಹಲವು ದಿನಗಳಿಂದ ಅನಿರ್ದಿಷ್ಠಾವಧಿ ಮುಷ್ಕರ ನಡೆಸುತ್ತಿದ್ದ ಪೌರ ಕಾರ್ಮಿಕರು ಮಂಗಳವಾರ ಧರಣಿಯನ್ನು ಕೈಬಿಟ್ಟಿದ್ದಾರೆ...

Published On :
ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಹಲವು ದಿನಗಳಿಂದ ಅನಿರ್ದಿಷ್ಠಾವಧಿ ಮುಷ್ಕರ ನಡೆಸುತ್ತಿದ್ದ ಪೌರ ಕಾರ್ಮಿಕರು ಮಂಗಳವಾರ ಧರಣಿಯನ್ನು ಕೈಬಿಟ್ಟಿದ್ದಾರೆ.
ಪ್ರತಿಭಟನಾ ನಿರತ ಪೌರ ಕಾರ್ಮಿಕರ ಮುಖಂಡರೊಂದಿಗೆ ನಿನ್ನೆಯಷ್ಟೇ ಕುಮಾರಸ್ವಾಮಿಯವನರು ಬೆಂಗಳೂರಿನಲ್ಲಿ ಸಭೆ ನಡೆಸಿ, ಮಾತುಕತೆ ನಡೆಸಿದರು. ಈ ವೇಳೆ ಪೌರ ಕಾರ್ಮಿಕರ ಬೇಡಿಕೆಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಈ ಬಗ್ಗೆ ಸೂಕ್ತ ಪ್ರಸ್ತಾವವನ್ನು ಸಚಿವ ಸಂಪುಟದ ಮುಂದೆ ತರಲು ಅಧಿಕಾರಿಗಳಿಗೂ ಸೂಚಿಸಿದ್ದರು.
ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ಅವರು, ಬುಧವಾರದಿಂದ ದಸರಾ ಆರಂಭಗೊಳ್ಳಲಿದ್ದು, ಮಂಗಳವಾರ ರಾತ್ರಿಯಿಂದಲೇ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯಗಳನ್ನು ಆರಂಭಿಸಲಿದ್ದಾರೆ. ಮುಂದಿನ ಕೆಲ ದಿನಗಳ ಕಾಲ ಹೆಚ್ಚು ಗಂಟೆಗಳ ಕಾಲ ಕಾರ್ಮಿಕರು ಕೆಲಸ ಮಾಡಲಿದ್ದಾರೆ. ಧರಣಿ ಬಿಟ್ಟರೆ ನಮಗಾವುದೇ ಆಯ್ಕೆಗಳಿರಲಿಲ್ಲ. ನಮ್ಮಿಂದಾದ ಸಮಸ್ಯೆಗಳಿಗೆ ವಿಷಾದ ವ್ಯಕ್ತಪಡಿಸುತ್ತೇವೆ. ಮುಂದಿನ 48 ಗಂಟೆಗಳಲ್ಲಿ ನಗರ ಸ್ವಚ್ಛಗೊಳ್ಳಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಪ್ರತಿಭಟನೆKumaraswamyಕುಮಾರಸ್ವಾಮಿprotestಮೈಸೂರುMysurudasaraದಸರಾಪೌರ ಕಾರ್ಮಿಕರುcivic workers
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


