ನಾಡಹಬ್ಬ 'ಮೈಸೂರು ದಸರಾ' ಆರಂಭ; ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಚಾಲನೆ
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬುಧವಾರ ಚಾಲನೆ ನೀಡಿದರು. ಇಂದು ಬೆಳಗ್ಗೆ 7.05ಕ್ಕೆ ತುಲಾ ಲಗ್ನದಲ್ಲಿ ....

ಮೈಸೂರು: ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬುಧವಾರ ಚಾಲನೆ ನೀಡಿದರು.
ಇಂದು ಬೆಳಗ್ಗೆ 7.05ಕ್ಕೆ ತುಲಾ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರಪೂಜೆ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಹಾಗೂ ಖ್ಯಾತ ಬರಹಗಾರ್ತಿ ಸುಧಾ ನಾರಾಯಣ ಮೂರ್ತಿ ನಾಡ ಹಬ್ಬಕ್ಕೆ ಅಧಿಕೃತ ಚಾಲನೆ ನೀಡಿದರು. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡ, ಸಂಸ್ಕೃತಿ ಖಾತೆ ಸಚಿವೆ ಜಯಮಾಲಾ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ ಸಿಂಹ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಸುಧಾಮೂರ್ತಿ ಮತ್ತು ಅವರ ಕುಟುಂಬ ಸದಸ್ಯರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಹತ್ತು ದಿನಗಳ ಕಾಲವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಾಡಿನ ಸಾಂಸ್ಕೃತಿಕ ಸೊಗಡಿಗೆ ಕನ್ನಡಿ ಹಿಡಿಯಲಿವೆ. ದಸರಾ ಸಂಭ್ರಮವನ್ನು ಕಣ್ತುಂಬಿಸಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಜನ ಮೈಸೂರಿಗೆ ಆಗಮಿಸುತ್ತಿದ್ದಾರೆ. ವಿಜಯ ದಶಮಿ ದಿನ ನಡೆಯುವ ಜಂಬೂ ಸವಾರಿ ವಿಶ್ವ ಪ್ರಸಿದ್ಧಿ ಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


