ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿ: ಸಂಸದ ಪ್ರತಾಪ್ ಸಿಂಹ ಸಿಎಂಗೆ ಒತ್ತಾಯ
ಟಿಪ್ಪು ಜಯಂತಿ ಆಚರಿಸುವುದು ಈ ನಾಡಿನ ಸಂಸ್ಕೃತಿಗೆ ವಿರುದ್ಧವಾದದ್ದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ...

ಮೈಸೂರು: ಟಿಪ್ಪು ಜಯಂತಿ ಆಚರಿಸುವುದು ಈ ನಾಡಿನ ಸಂಸ್ಕೃತಿಗೆ ವಿರುದ್ಧವಾದದ್ದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಾದರೂ ಟಿಪ್ಪು ಜಯಂತಿ ಆಚರಿಸುವುದನ್ನು ಬಂದ್ ಮಾಡಬೇಕು ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.
ನಾಡದೇವಿ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿ ಮೈಸೂರು ದಸಾರ ಉದ್ಘಾಟನೆ ನಂತರ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಟಿಪ್ಪು ಜಯಂತಿ ಕುರಿತು ಮಾತನಾಡಿದ ಸಂಸದ ಪ್ರತಾಪ್‌ಸಿಂಹ, ಇಂದು ದಸರಾ ಆಚರಣೆ ಮಾಡುತ್ತಿದ್ದರೆ ಅದು ಮೈಸೂರು ಅರಸರ ಕೊಡುಗೆ.ಅಂತಹ ಕುಟುಂಬದ ರಕ್ತಪಾತಕ್ಕೆ ಕಾರಣವಾಗಿದ್ದು ಟಿಪ್ಪು ಸುಲ್ತಾನ. ಈ ಹೊತ್ತಿನಲ್ಲಾದರೂ ಮೈಸೂರು ಅರಸರಿಗೆ ಗೌರವ ನೀಡಿ. ನಿಮ್ಮ ಆಳ್ವಿಕೆಯಲ್ಲಿಯಾದರೂ ಟಿಪ್ಪು ಜಯಂತಿ ಬಂದ್ ಮಾಡಿ ಎಂದು ವೇದಿಕೆಯಲ್ಲಿದ್ದ ಸಿಎಂ ಕುಮಾರಸ್ವಾಮಿಯವರನ್ನು ಮನವಿ ಮಾಡಿದರು.
ಮೈಸೂರು ಮಹಾನಗರ ಪಾಲಿಕೆಗೆ ಪ್ರಥಮ ಪ್ರಜೆ ಮೇಯರ್ ನೇಮಕವಾಗದ ಕಾರಣ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಬಾರಿ ಮೇಯರ್ ಉಪಸ್ಥಿತಿ ಇರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


