ಮಂಗಳೂರು-ಬೆಂಗಳೂರು ರೈಲು ಸಂಚಾರ ಇಂದು ಆರಂಭ
ಮಂಗಳೂರು-ಬೆಂಗಳೂರು ನಡುವೆ ರೈಲು ಸಂಚಾರ ಬುಧವಾರ ಆರಂಭವಾಗಲಿದೆ. ಕೊಡಗು ಜಿಲ್ಲೆಯ ...

ಬೆಂಗಳೂರು: ಮಂಗಳೂರು-ಬೆಂಗಳೂರು ನಡುವೆ ರೈಲು ಸಂಚಾರ ಬುಧವಾರ ಆರಂಭವಾಗಲಿದೆ. ಕೊಡಗು ಜಿಲ್ಲೆಯ ಪ್ರವಾಹದಿಂದಾಗಿ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆಯಲ್ಲಿ ಭೂಕುಸಿತದಿಂದಾಗಿ ರೈಲು ಸಂಚಾರ ಕಳೆದೆರಡು ತಿಂಗಳಿನಿಂದ ಸ್ಥಗಿತಗೊಂಡಿತ್ತು.
ರೈಲಿಗೆ ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ ವಿಜಯ ತಿಳಿಸಿದ್ದಾರೆ.
ಕೆಂಪೇಗೌಡ ನಿಲ್ದಾಣ ಬೆಂಗಳೂರಿನಿಂದ ಕಣ್ಣೂರು/ಕಾರವಾರ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 16511/16513) ಇಂದು ಸಂಜೆ 7.15ಕ್ಕೆ ಬೆಂಗಳೂರಿನಿಂದ ಹೊರಡಲಿದೆ. ಮತ್ತು ಅದಕ್ಕೆ ಪರ್ಯಾಯ ರೈಲು ಕಾರವಾರ/ ಕಣ್ಣೂರು -ಕೆಎಸ್ಆರ್ ಬೆಂಗಳೂರು ರೈಲು ನಾಳೆಯಿಂದ ಸಂಚಾರ ಆರಂಭಿಸಲಿದೆ.
ಇದೇ 12ರಿಂದ ಯಶವಂತಪುರ-ಕಾರವಾರ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16515 ಬೆಳಗ್ಗೆ 7.10ಕ್ಕೆ ಯಶವಂತಪುರದಿಂದ ಹೊರಡಲಿದೆ. ಅದಕ್ಕೆ ಪರ್ಯಾಯವಾಗಿ ಅಕ್ಟೋಬರ್ 12ರಿಂದ ಕಾರವಾರದಿಂದ ರೈಲು ಬೆಂಗಳೂರಿಗೆ ಸಂಚರಿಸಲಿದೆ.
ಆಗಸ್ಟ್ 14ರಂದು ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದರಿಂದ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿತ್ತು. ನೈರುತ್ಯ ರೈಲ್ವೆಯ ಮೈಸೂರು ವಿಭಾಗ ಅಕ್ಟೋಬರ್ 1ರಂದು ಭೂಕುಸಿತವಾದ ಕಡೆಗಳಲ್ಲಿ ರೈಲ್ವೆ ಹಳಿಗಳ ದುರಸ್ತಿ ಕಾರ್ಯ ನಡೆಸಿದ್ದು ಗೂಡ್ಸ್ ರೈಲು ಸಂಚಾರ ಆರಂಭಿಸಿದೆ.
ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಕೆಲವು ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಉಳಿದಿದ್ದು ಅವುಗಳು ಕೂಡ ಮುಂದಿನ ಕೆಲ ವಾರಗಳಲ್ಲಿ ಮುಗಿಯಲಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ರೈಲು ಸಂಚಾರ ಆರಂಭವಾಗಬೇಕಿತ್ತು. ಆದರೆ ಸಿರಿಬಾಗಿಲು ರೈಲ್ವೆ ನಿಲ್ದಾಣದ ಹತ್ತಿರ ಮತ್ತೆ ಭೂಕುಸಿತವಾಗಿದ್ದರಿಂದ ತೆರವು ಕಾರ್ಯಾಚರಣೆಯಿಂದ ಸ್ವಲ್ಪ ಸಮಯ ಹಿಡಿಯಿತು ಎಂದು ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಅಪರ್ಣಾ ಗಾರ್ಗ್ ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


