ರಾಜ್ಯ

2ನೇ ಶನಿವಾರವೇ ರಜೆ, 3ನೇ ಶನಿವಾರ ಇಲ್ಲ: ಸರ್ಕಾರ ಸ್ಪಷ್ಟನೆ

ಎರಡನೇ ಶನಿವಾರದ ರಜೆ ಕುರಿತು ಇದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ಗುರುವಾರ ತೆರೆ ಎಳೆದಿದ್ದು, ಎರಡನೇ ಶನಿವಾರದ ರಜೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟಪಡಿಸಿದೆ...

2ನೇ ಶನಿವಾರವೇ ರಜೆ, 3ನೇ ಶನಿವಾರ ಇಲ್ಲ: ಸರ್ಕಾರ ಸ್ಪಷ್ಟನೆ
ಸಂಗ್ರಹ ಚಿತ್ರ
Published On :
ಬೆಂಗಳೂರು: ಎರಡನೇ ಶನಿವಾರದ ರಜೆ ಕುರಿತು ಇದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ಗುರುವಾರ ತೆರೆ ಎಳೆದಿದ್ದು, ಎರಡನೇ ಶನಿವಾರದ ರಜೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟಪಡಿಸಿದೆ. 
ಅ.13ರ ಎರಡನೇ ಶನಿವಾರ ರಜೆ ಇರುವುದನ್ನು ರದ್ದುಪಡಿಸಿ ಅ.20ರಂದು ರಜೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಹಬ್ಬಿಸಲಾಗಿತ್ತು. 
ದಸರಾ ಪ್ರಯುಕ್ತ ಗುರುವಾರ, ಶುಕ್ರವಾರ ಸರ್ಕಾರಿ ರಜೆ ಇದ್ದು. ಅ.20ರ ಮೂರನೇ ಶನಿವಾರದಂದು ಸರ್ಕಾರಿ ಸಿಬ್ಬಂದಿ ರಜೆ ಹಾಕಲಿದ್ದಾರೆ. ಹೀಗಾಗಿ ಎರಡನೇ ಶನಿವಾರ ಬದಲಿಗೆ ಮೂರನೇ ಶನಿವಾರ ರಜೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. 
ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ಸರ್ಕಾರ, ಎರಡನೇ ಶನಿವಾರದ ರಜೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಅ.20ರ ಮೂರನೇ ಶನಿವಾರ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.