ಖಾಸಗಿ ಆಸ್ಪತ್ರೆಯಲ್ಲಿ ಎಚ್1ಎನ್1 ಪರೀಕ್ಷೆಗೆ 2500 ರು. ದರ ನಿಗದಿಪಡಿಸಿದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಎಚ್1ಎನ್1 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಪ್ರತಿ ಎಚ್1ಎನ್1 ಪರೀಕ್ಷೆಗೆ 2500...

Published On :
ಬೆಂಗಳೂರು: ರಾಜ್ಯದಲ್ಲಿ ಎಚ್1ಎನ್1 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಪ್ರತಿ ಎಚ್1ಎನ್1 ಪರೀಕ್ಷೆಗೆ 2500 ರುಪಾಯಿಗಿಂತ ಹೆಚ್ಚು ದರ ವಿಧಿಸುವಂತಿಲ್ಲ ಎಂದು ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದೆ.
ಈ ವರ್ಷ ರಾಜ್ಯದಲ್ಲಿ ಒಟ್ಟು 441 ಎಚ್1ಎನ್1 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿಯೇ 99 ಪ್ರಕರಣಗಳು ವರದಿಯಾಗಿದ್ದವು. ಇದನ್ನೆ ಬಂಡವಾಳ ಮಾಡಿಕೊಂಡ ಖಾಸಗಿ ಆಸ್ಪತ್ರೆಗಳು ಎಚ್1ಎನ್1 ಪೀಡಿತರ ಗಂಟಲಿನ ಸ್ವಾಬ್ ಪರೀಕ್ಷೆಗೆ 4000 ರು.ಗಿಂತ ಅಧಿಕ ದರ ವಸೂಲಿ ಮಾಡುತ್ತಿದ್ದವು.
ಖಾಸಗಿ ಆಸ್ಪತ್ರೆಗಳು ಎಚ್1ಎನ್1 ಪರೀಕ್ಷೆಗೆ ಹೆಚ್ಚು ದರ ವಿಧಿಸುತ್ತಿರುವ ಬಗ್ಗೆ ಆರೋಗ್ಯ ಇಲಾಖೆಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ದರ ನಿಗದಪಡಿಸಿದೆ. ಜತೆಗೆ ಎಚ್1ಎನ್1 ಸಂಬಂಧಿತ ಎಲ್ಲ ಪರೀಕ್ಷೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ ಎಂದು ಹೇಳಿದೆ.
ಆಸ್ಪತ್ರೆಗಳಲ್ಲಿ ಎಚ್1ಎನ್1 ಪೀಡಿತರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಮತ್ತು ದಾದಿಯರು ಕೂಡ ಲಸಿಕೆ ತೆಗೆದುಕೊಳ್ಳುವಂತೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


