ರಾಜ್ಯ

ಬೆಂಗಳೂರು: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಕೇರಳ ಯುವಕನ ಹತ್ಯೆ

ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಕೇರಳ ಮೂಲದ ಯುವಕನಿಗೆ ಚಾಕುವಿನಿಂದ...

ಬೆಂಗಳೂರು: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಕೇರಳ ಯುವಕನ ಹತ್ಯೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಕೇರಳ ಮೂಲದ ಯುವಕನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಹತ್ಯೆಯಾದ ಯುವಕ ಗೌಮತ್ ಕೃಷ್ಣ(25) ಎಂದು ಗುರುತಿಸಲಾಗಿದ್ದು, ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಸೇರಿ ಪಾರ್ಟ್ ಮಾಡಿ ವಾಪಸ್ ಹಲಸೂರು ಗೇಟ್ ಕಡೆ ಹೋಗುತ್ತಿದ್ದಾಗ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಇಲ್ಲಿ ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸುತ್ತಾ ಜಗಳವಾಡಿ ಒಬ್ಬನ ಎದೆಗೆ ಚಾಕುವಿನಿಂದ ಚುಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೌತಮ್ ಚಿಕ್ಕಪೇಟೆಯಲ್ಲಿನ ಕಾರ್ಗೋ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಸ್ನೇಹಿತ ವೈಜಾಕ್ ಜೊತೆ ನಡೆದುಕೊಂಡು ಬರುತ್ತಿದ್ದರು. ಮಾರ್ಗಮಧ್ಯೆ ಮೈಸೂರು ಬ್ಯಾಂಕ್ ಸರ್ಕಲ್‍ನ ಫುಟ್‍ಪಾತ್ ಬಳಿ ಇವರಿಬ್ಬರು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಇಲ್ಲಿ ಏನು ಮಾಡುತ್ತಿದ್ದೀರ ಎಂದು ಕನ್ನಡದಲ್ಲಿ ಪ್ರಶ್ನಿಸಿದ್ದಾರೆ. ಈ ವೇಳೆ ಗೌತಮ್ ಹಾಗೂ ದುಷ್ಕರ್ಮಿಗಳ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಗೌತಮ್ ಎದೆಗೆ ಚುಚ್ಚಿ ಪರಾರಿಯಾಗಿದ್ದಾರೆ.
ಗಂಭೀರ ಗಾಯಗೊಂಡ ಗೌತಮ್‍ನನ್ನು ಸ್ನೇಹಿತನೇ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿಡಲಾಗಿದೆ. 
ಈ ಸಂಬಂಧ ಉಪ್ಪಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.