ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ದಂಪತಿ ಸಾವು
ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ದಂಪತಿ ಮೃತಪಟ್ಟ ದಾರುಣ ಘಟನೆ ಬುಧವಾರ ವಿಜಯನಗರ...

Published On :
ಬೆಂಗಳೂರು: ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ದಂಪತಿ ಮೃತಪಟ್ಟ ದಾರುಣ ಘಟನೆ ಬುಧವಾರ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೂಡಲಪಾಳ್ಯದಲ್ಲಿ ನಡೆದಿದೆ.
ಮೃತ ದಂಪತಿ ಶಿವಣ್ಣ(55) ಹಾಗೂ ಮಂಗಮ್ಮ(45) ಎಂದು ಗುರುತಿಸಲಾಗಿದ್ದು, ಮೂಲತಃ ತಮಿಳುನಾಡಿನವರು. ಮೂಡಲಪಾಳ್ಯದಲ್ಲಿ ವಾಸವಾಗಿದ್ದರು.
ಶೀಟಿನ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರೊಳಗೆ ದಂಪತಿಗಳು ಬೆಂದು ಹೋಗಿದ್ದರು.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


