ಲೋಕಸಭೆ ಚುನಾವಣೆ 2019: ಬೆಂಗಳೂರಿನಲ್ಲೇ ಇವಿಎಂ, ವಿವಿಪ್ಯಾಟ್ ಪರಿಶೀಲನೆ
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆ 2019 ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಚುನಾವಣೆಗೆ ಬಳಸಲಾಗುವ ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್) ಮತ್ತು ವಿವಿಪ್ಯಾಟ್ (ಮತ ಖಾತರಿ ಯಂತ್ರ)ಗಳನ್ನು...

Published On :
ಬೆಂಗಳೂರು: ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆ 2019 ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಚುನಾವಣೆಗೆ ಬಳಸಲಾಗುವ ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್) ಮತ್ತು ವಿವಿಪ್ಯಾಟ್ (ಮತ ಖಾತರಿ ಯಂತ್ರ)ಗಳನ್ನು ಬೆಂಗಳೂರಿನಲ್ಲಿಯೇ ಪರಿಶೀಲನೆ ನಡೆಸಲಾಗುತ್ತದೆ ಬೆಂಗಳೂರು ನಗರ ಉಪ ಆಯುಕ್ತ ಬಿ.ಎಂ.ವಿಜಯ್ ಶಂಕರ್ ಅವರು ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲೋಕಸಭೆ ಚುನಾವಣೆಗೆ ಬಳಸಲಾಗುವ ಇವಿಎಂ ಹಾಗೂ ವಿವಿಪ್ಯಾಟ್ ಗಳನ್ನು ನಗರ ಕಂದಾಯ ಭವನದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಇವಿಎಂ ಹಾಗೂ ವಿವಿಪ್ಯಾಟ್ ಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಅರಿಯಲು ರಾಜಕೀಯ ಪಕ್ಷಗಳ ನಾಯಕರು ಕಂದಾಯ ಭವನಕ್ಕೆ ಬಂದು ತಿಳಿದುಕೊಳ್ಳಬೇಕೆಂದು ಆಹ್ವಾನ ನೀಡಿದ್ದಾರೆ.
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ನಾವು ಈ ಪರಿಶೀಲನೆಗಳನ್ನು ನಡೆಸುತ್ತಿದ್ದೇವೆ. ಬಿಇಎಲ್ ಇಂಜಿನಿಯರ್ಸ್ ಗಳ ಸಹಾಯದೊಂದಿಗೆ ಅಕ್ಟೋಬರ್ 15 ರಿಂದಲೂ ಯಂತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಪಾರದರ್ಶಕತೆ ಕಾಪಾಡುವ ಸಲುವಾಗಿ ಯಂತ್ರಗಳನ್ನು ಪರಿಶೀಲಿಸಲಾಗುತ್ತಿದೆ.
2018ರ ವಿಧಾನಸಭಾ ಚುನಾವಣೆ ವೇಳೆ ಇವಿಎಂ ಬಗ್ಗೆ ಸಾಕಷ್ಟು ಗೊಂದಲಗಳು ಮೂಡಿದ್ದವು. ಈ ಗೊಂದಲಗಳನ್ನು ದೂರಾಗಿಸಲು ನಾವು ಪರಿಶೀಲನೆಗಳನ್ನು ನಡೆಸುತ್ತಿದ್ದೇವೆ. ಇನ್ನೊಂದು ತಿಂಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ. ಗುರುತಿನ ಚೀಟಿ ತೋರಿಸಿದ ಯಾವುದೇ ರಾಜಕೀಯ ಪಕ್ಷದ ಸದಸ್ಯರೂ ಕೂಡ ಕಂದಾಯ ಭವನಕ್ಕೆ ಬಂದು ಇವಿಎಂ ಮತ್ತು ವಿವಿಪ್ಯಾಟ್ ಗಳ ಕಾರ್ಯನಿರ್ವಹಣೆ ಬಗ್ಗೆ ತಿಳಿದುಕೊಳ್ಳಬಹುದು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruElection Commissionಚುನಾವಣಾ ಆಯೋಗಲೋಕಸಭಾ ಚುನಾವಣೆLok Sabha electionsEVMಇವಿಎಂವಿವಿಪ್ಯಾಟ್VVPAT
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


