ಶ್ರೀರಂಗಪಟ್ಟಣದಲ್ಲೂ ಮೈಸೂರು ರೀತಿ ಅದ್ದೂರಿ ದಸರಾ: ಸಿಎಂ ಕುಮಾರಸ್ವಾಮಿ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾಗೆ ಇನ್ನು 3 ದಿನ ಬಾಕಿಯಿರುವಾಗಲೇ ಸಾಂಸ್ಕೃತಿಕ ರಾಜಧಾನಿಯ ಪಕ್ಕದಲ್ಲಿಯೇ ಇರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲೂ ಮೈಸೂರಿನ ರೀತಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು...

Published On :
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇನ್ನು 3 ದಿನ ಬಾಕಿಯಿರುವಾಗಲೇ ಸಾಂಸ್ಕೃತಿಕ ರಾಜಧಾನಿಯ ಪಕ್ಕದಲ್ಲಿಯೇ ಇರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲೂ ಮೈಸೂರಿನ ರೀತಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಚಾಮುಂಡೇಶ್ವರಿ ಉತ್ಸವ ಮೂರ್ತಿ ಹೊತ್ತ ಜಂಬೂ ಸವಾರಿ, ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿರುವ ಅಭಿಮನ್ಯು, ವರಲಕ್ಷ್ಮಿ, ಕಾವೇರಿ ಆನೆಗಳು ಹಾಗೂ ಬ್ರೆಜಿಲ್'ನ ಸಾಂಬಾ ನೃತ್ಯ ಶ್ರೀರಂಗಪಟ್ಟಣ ದಸರೆಯ ಪ್ರಮುಖ ಆಕರ್ಷಣೆಯಾಗಿದ್ದವು.
ಶ್ರೀರಂಗಪಟ್ಟಣದ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಂಗಳವಾರ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಸಚಿವರಾದ ಸಿಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾರಾ. ಮಹೇಶ್, ಬಂಡೆಪ್ಪ ಕಾಶಂಪೂರ್, ಶಾಸಕ ರವೀಂದ್ರ ಶ್ರೀಕಂಠಯ್ಯ, ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಈ ವೇಳೆ ಹಾಜರಿದ್ದರು.
3 ದಿನಗಳ ಕಾಲ ದಸರಾ ಉತ್ಸವ ನಡೆಯಲಿದ್ದು, ಜಾನಪದ ಕಲಾ ತಂಡಗಳಾದ ಕೋಲಾಟ, ನಂದಿಧ್ವಜ, ಗಾರುಡಿ, ಗೊಂಬೆಗಳು, ಪಟದ ಕುಣಿತ, ಡೊಣ್ಣುಕುಣಿತ, ವೀರಗಾಸೆ ಕುಣಿತ, ಕತ್ತಿವರಸೆ, ದೊಣ್ಣೆವರಸೆ, ನಗಾರಿವಾದ್ಯ, ಪೊಲೀಸ್ ಬ್ಯಾಂಡ್, ಬ್ರೆಜಿಲ್ ದೇಶ ಪ್ರಸಿದ್ಧ ಸಾಂಬ್ ನೃತ್ಯ ಪ್ರದರ್ಶನ, ಯಕ್ಷಗಾನ, ಹುಲಿವೇಷ, ಕೇರಳದ ಕಥಕ್ಕಳಿ ಸೇರಿದಂತೆ 30ಕ್ಕೂ ಹೆಚ್ಚು ತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ನೀಡಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


