ರಾಜಮಾತೆ ಪ್ರಮೋದಾದೇವಿ ಒಡೆಯರ್ ನಾದಿನಿ ವಿಶಾಲಾಕ್ಷಿದೇವಿ ನಿಧನ
ಜಯದಶಮಿ ಸಂಭ್ರಮದಲ್ಲಿದ್ದ ಮೈಸೂರು ರಾಜವಂಶಸ್ಥರಿಗೆ ದುಃಖದ ಮೇಲೆ ದುಖ ಎದುಆಗಿದೆ. ಇಂದು ಬೆಳಿಗ್ಗೆಯಷ್ಟೇ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟಚಿನ್ನಮ್ಮಣಿ(98)

Published On :
ಬೆಂಗಳೂರು: ವಿಜಯದಶಮಿ ಸಂಭ್ರಮದಲ್ಲಿದ್ದ ಮೈಸೂರು ರಾಜವಂಶಸ್ಥರಿಗೆ ದುಃಖದ ಮೇಲೆ ದುಖ ಎದುಆಗಿದೆ. ಇಂದು ಬೆಳಿಗ್ಗೆಯಷ್ಟೇ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟಚಿನ್ನಮ್ಮಣಿ(98) ವಿಧುಇವಶರಾಗಿದ್ದರು. ಇದೀಗ ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೋದರಿ ವಿಶಾಲಾಕ್ಷಿದೇವಿ (56) ಸಹ ನಿಧನರಾಗಿದ್ದಾರೆ. ಈ ಮೂಲಕ ಒಂದೇ ದಿನ ರಾಜ ಕುಟುಂಬದ ಇಬ್ಬರು ಪ್ರಮುಖರು ಅಸುನೀಗಿದಂತಾಗಿದೆ.
ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ವಿಶಾಲಾಕ್ಷಿದೇವಿ ಬಹು ಅಂಗಾಂಗ ವೈಫಲ್ಯದಿಂದ ಶುಕ್ರವಾರ ನಿಧನರಾದರೆಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಮೃತರಿಗೆ ಪತಿ, ಪುತ್ರ ಹಾಗೂ ಪುತ್ರಿಯರಿದ್ದಾರೆ. ಶನಿವಾರ ಮೈಸೂರು "ಖಾಸ್ ಮಧುವನ"ದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSrikantadatta WadiyarVijayadashamiವಿಜಯದಶಮಿಮೈಸೂರು ಒಡೆಯರ್Mysuru Wadiyarಶ್ರೀಕಂಠದತ್ತ ಒಡೆಯರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


