ರಾಜ್ಯ

ಬೈಕ್‌ಗೆ ಕಾರು ಡಿಕ್ಕಿ, ಫ್ಲೈಓವರ್‌ನಿಂದ ಕೆಳಗೆ ಬಿದ್ದ ಉದ್ಯಮಿ, ಮಗನ ದೇಹ ತುಂಡು ತುಂಡು!

ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 42 ವರ್ಷದ ಉದ್ಯಮಿ ಹಾಗೂ 12 ವರ್ಷದ ಮಗ ಫ್ಲೈಓವರ್‌ನಿಂದ ಕೆಳಗೆ ಬಿದ್ದು ದುರ್ಮರಣ ಹೊಂದಿರುವ ದಾರುಣ ಘಟನೆ ನಗರ ಆವಲಹಳ್ಳಿ ಬಳಿ ನಡೆದಿದೆ...

Published On :
ಬೆಂಗಳೂರು: ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 42 ವರ್ಷದ ಉದ್ಯಮಿ ಹಾಗೂ 12 ವರ್ಷದ ಮಗ ಫ್ಲೈಓವರ್‌ನಿಂದ ಕೆಳಗೆ ಬಿದ್ದು ದುರ್ಮರಣ ಹೊಂದಿರುವ ದಾರುಣ ಘಟನೆ ನಗರ ಆವಲಹಳ್ಳಿ ಬಳಿ ನಡೆದಿದೆ. 
ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಬೆಂಗಳೂರು-ಚೆನ್ನೈ ಹೆದ್ದಾರಿ ಹೊಸಕೋಟೆ ಬಳಿ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಉದ್ಯಮಿ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮೃತಪಟ್ಟರೇ, ಮಗನ ದೇಹ ಎರಡು ತುಂಡುಗಳಾಗಿದೆ. 
ಬ್ರಹ್ಮನಂದ ರೆಡ್ಡಿ ಹಾಗೂ ಅವರ ಮಗ ಮೌನ ಸಾಯಿ ರೆಡ್ಡಿ ಅಪಘಾತದಲ್ಲಿ ಮೃತಪಟ್ಟಿದ್ದು ಅವರು ಕೃಷ್ಣರಾಜಪುರದಿಂದ ಹೊಸಕೋಟೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಆವಲಹಳ್ಳಿಯ ಪೊಲೀಸರು ತಿಳಿಸಿದ್ದಾರೆ. 
ಅಪಘಾತದ ಬಳಿಕ ಕಾರು ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.