ಪಾನಮತ್ತರಾಗಿ ತರಗತಿಗೆ ಹಾಜರ್: ಪೋಷಕರನ್ನು ಕರೆಸಿದ್ದಕ್ಕೆ ಕಾಲೇಜು ಕಟ್ಟಡದಿಂದ ಧುಮುಕಿದ ವಿದ್ಯಾರ್ಥಿಗಳು
ಪಾನಮತ್ತರಾಗಿ ತರಗತಿಗಳಿಗೆ ಹಾಜರಾಗಿದ್ದ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕಾಲೇಜು ಕಟ್ಟಡದಿಂದ ಧುಮುಕಿದ್ದಾರೆ.

Published On :
ಬೆಂಗಳೂರು: ಪಾನಮತ್ತರಾಗಿ ತರಗತಿಗಳಿಗೆ ಹಾಜರಾಗಿದ್ದ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕಾಲೇಜು ಕಟ್ಟಡದಿಂದ ಧುಮುಕಿದ್ದಾರೆ.
ಜಾಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರೂ ವಿದ್ಯಾರ್ಥಿಗಳಿಗೆ ಗಾಯಗಳುಂಟಾಗಿವೆ. ಅಕ್ಬರ್ (19) ಈ ಬಗ್ಗೆ ಪೊಲೀಸರಿಗೆ ಹೇಳಿಕೆ ನೀಡಿದ್ದು, ದಿನಗೂಲಿ ನೌಕರರಾಗಿದ್ದ ತನ್ನ ಪೋಷಕರಿಂದಲೇ ಕಿರುಕುಳ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಮದ್ಯವ್ಯಸನನಾಗಿದ್ದೆ ಎಂದು ಹೇಳಿದ್ದಾರೆ. ಪೋಷಕರು ನನಗೆ ಪ್ರತಿ ನಿತ್ಯ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದರು. ಇದು ನನ್ನ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತಿತ್ತು, ಆದ್ದರಿಂದ ನಾನು ಮದ್ಯ ಸೇವನೆ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದಾನೆ. ಗೌತಮ್ (20) ಎಂಬ ಮತ್ತೋರ್ವ ವಿದ್ಯಾರ್ಥಿಯ ಪೋಷಕರೂ ದಿನಗೂಲಿ ನೌಕರರಾಗಿದ್ದಾರೆ. ಆದರೆ ಈ ವಿದ್ಯಾರ್ಥಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಇಬ್ಬರೂ ವಿದ್ಯಾರ್ಥಿಗಳು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಲಹಳ್ಳಿಯಲ್ಲಿರುವ ಸೇಂಟ್ ಕ್ಲೆರೆಟ್ ಕಾಲೇಜ್ ನಲ್ಲಿ ಇಬ್ಬರೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಸೆ.22 ರಂದು ಮಧ್ಯಾಹ್ನ ತರಗತಿಯಲ್ಲಿ ಇಬ್ಬರೂ ವಿದ್ಯಾರ್ಥಿಗಳು ಪಾನಮತ್ತರಾಗಿರುವುದು ಸಹಪಾಠಿಗಳಿಗೆ ತಿಳಿದು ಪ್ರಾಧ್ಯಾಪಕರ ಗಮನಕ್ಕೆ ತಂದಿದ್ದಾರೆ. ವಿಷಯ ತಿಳಿದ ಕಾಲೇಜು ಪ್ರಾಂಶುಪಾಲರು ಇಬ್ಬರೂ ವಿದ್ಯಾರ್ಥಿಗಳ ಪೋಷಕರನ್ನು ಕರೆಸಿ ಮತ್ತೊಮ್ಮೆ ಇಂತಹ ಘಟನೆಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಈ ಬಳಿಕ ಅಕ್ಬರ್ ತನ್ನ ಪೋಷಕರೊಂದಿಗೇ ವಾಗ್ವಾದಕ್ಕೆ ಮುಂದಾಗಿ 2 ನೇ ಮಹಡಿಯಿಂದ ಕೆಳಗೆ ಧುಮುಕಿದ್ದಾನೆ. ಇದನ್ನು ತಿಳಿದ ಗೌತಮ್ ತಾನೂ ಸಹ ತನ್ನ ಸ್ನೆಹಿತನಂತೆಯೇ ಕೆಳಗೆ ಧುಮುಕಿದ್ದಾನೆ. ಘಟನೆಯಲ್ಲಿ ಇಬ್ಬರೂ ವಿದ್ಯಾರ್ಥಿಗಳ ಕಾಲು ಮುರಿದಿದ್ದು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಲೇಜು ಮೂಲಗಳ ಪ್ರಕಾರ ಇಬ್ಬರೂ ವಿದ್ಯಾರ್ಥಿಗಳು ತರಗತಿಗಳಿಗೆ ಸರಿಯಾಗಿ ಹಾಜರಾಗುತ್ತಿದ್ದರು, ಈ ವರೆಗೂ ಒಂದೇ ಒಂದೂ ತರಗತಿಗಳನ್ನೂ ತಪ್ಪಿಸಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


