ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ ರೂ.35 ಲಕ್ಷ ವಶ
ಪ್ರತ್ಯೇಕ ಘಟನೆಯಲ್ಲಿ ಲೋಕಸಭಾ ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸಲಾಗುತ್ತಿದ್ದ ರೂ.35 ಲಕ್ಷವನ್ನು ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ನಡೆದಿದೆ...

Published On :
ಬೆಂಗಳೂರು: ಪ್ರತ್ಯೇಕ ಘಟನೆಯಲ್ಲಿ ಲೋಕಸಭಾ ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸಲಾಗುತ್ತಿದ್ದ ರೂ.35 ಲಕ್ಷವನ್ನು ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಶಿವಮೊಗ್ಗ ಸಮೀಪದ ಮಡಿಕೆ ಚೀಲೂರು ಚೆಕ್'ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ರೂ.30 ಲಕ್ಷಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಹಣ ಗುರುಪುರ ಬಡಾವಣೆ ನಿವಾಸಿ, ಅಡಕೆ ವರ್ತಕ ಶ್ರೀನಿವಾಸ್ ಅವರಿಗೆ ಸೇರಿದ್ದಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು, ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮದಲಗಟ್ಟಿ ಚೆಕ್ ಪೋಸ್ಟ್ ನಲ್ಲಿ ಸಾರಿಗೆ ಬಸ್ ನಲ್ಲಿ ಕೊಟ್ಟೂರು ಗ್ರಾಮದಲ್ಲಿ ಚಂದ್ರಪ್ಪ ನಾಗಪ್ಪ ಎಂಬುವವರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ.4.49 ಲಕ್ಷ ನಗದನ್ನು ಎಸ್ಐಟಿ ತಂಡ ವಶಪಡಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


