ಗುಜರಾತ್‌ನಲ್ಲಿ ಪತ್ನಿ ಕೊಂದು ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಟೆಕ್ಕಿ, 15 ವರ್ಷಗಳ ಬಳಿಕ ಬಂಧನ!
2003ರಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ಪತ್ನಿಯನ್ನು ಕೊಂದು ಅಲ್ಲಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನಕಲಿ ಹೆಸರಿನಲ್ಲಿ ಪ್ರತಿಷ್ಠಿತ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ...

Published On :
ಬೆಂಗಳೂರು: 2003ರಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ಪತ್ನಿಯನ್ನು ಕೊಂದು ಅಲ್ಲಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನಕಲಿ ಹೆಸರಿನಲ್ಲಿ ಪ್ರತಿಷ್ಠಿತ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯನ್ನು ಸಿಸಿಐ ಪೊಲೀಸರು ಬಂಧಿಸಿದ್ದಾರೆ.
ಟೆಕ್ಕಿ ತರುಣ್ ಜಿನ್ ರಾಜ್ ಅಲಿಯಾಸ್ ಪ್ರವೀಣ್ ಬಾಟಲೆ ಬಂಧಿತ ಆರೋಪಿ. ಈತ 15 ವರ್ಷಗಳ ಹಿಂದೆ ಸಜಿನಿಯನ್ನು ವ್ಯವಸ್ಥಿತ ಸಂಚು ರೂಪಿಸಿ ಕೊಲೆ ಮಾಡಿ ನಂತರ ತಲೆ ಕೂದಲನ್ನು ತೆಗೆಸಿ ಗುರುತು ಸಿಗದಂತೆ ವೇಷ ಬದಲಿಸಿಕೊಂಡು ಬೆಂಗಳೂರಿಗೆ ಬಂದಿದ್ದ ತನ್ನ ಹೆಸರನ್ನು ಪ್ರವೀಣ್ ಬಾಟಲೆ ಎಂದು ಬದಲಿಸಿಕೊಂಡು ಶೈಕ್ಷಣಿಕ ದಾಖಲೆಗಳಲ್ಲಿಯೂ ಹೆಸರು ಬದಲಿಸಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗ ಪಡೆದಿದ್ದ.
ತರುಣ್ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ ಗುಜರಾತ್ ಪೊಲೀಸರು ಕರ್ನಾಟಕ ಸಿಸಿಬಿ ಪೊಲೀಸರ ಸಹಕಾರ ಕೋರಿದ್ದರು. ಎಸಿಪಿ ಡಾ ಎಚ್ ಎನ್ ವೆಂಕಟೇಶ್ ಪ್ರಸನ್ನ ನೇತೃತ್ವದ ತಂಡ ತನಿಖೆ ಆರಂಭಿಸಿ ಆರೋಪಿ ಕೆಲಸ ಮಾಡುತ್ತಿದ್ದ ಕಂಪನಿ ಪತ್ತೆ ಹಚ್ಚಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಂತರ ಅಹಮದಾಬಾದ್ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
2003ರಲ್ಲಿ ವ್ಯವಸ್ಥಿತವಾಗಿ ಸಂಚು ಮಾಡಿ ಸಹಚರರ ಜತೆಗೂಡಿ ಹಗ್ಗದಿಂದ ಕತ್ತು ಬಿಗಿದು ಕೊಲೆಗೈದಿದ್ದ. ನಂತರ ಆತನೇ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಾನು ಮನೆಯಲ್ಲಿ ಇಲ್ಲದ ವೇಳೆ ಮನೆ ಡಕಾಯಿತೆಗೆ ಬಂದಿರುವ ಕಳ್ಳರು ಚಿನ್ನಾಭರಣ ದೋಚಿ ಪತ್ನಿಯನ್ನು ಕೊಲೆಗೈದಿದ್ದಾರೆ ಎಂದು ದೂರು ನೀಡಿದ್ದ, ನಂತರ ಯಾರಿಗೂ ಗೊತ್ತಾಗದಂತೆ ಗುಜರಾತ್ ಬಿಟ್ಟು ಕರ್ನಾಟಕ ಸೇರಿಕೊಂಡಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


