ರಾಜ್ಯ

ಉಡುಪಿ ಬಳಿ ಆ್ಯಂಬುಲೆನ್ಸ್ ಭೀಕರ ಅಪಘಾತ: ಮೂವರ ಸಾವು, ಹಲವರು ಗಂಭೀರ

ಅಂಬುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟು, ...

ಉಡುಪಿ ಬಳಿ ಆ್ಯಂಬುಲೆನ್ಸ್ ಭೀಕರ ಅಪಘಾತ: ಮೂವರ ಸಾವು, ಹಲವರು ಗಂಭೀರ
ಸಾಂದರ್ಭಿಕ ಚಿತ್ರ
Published On :
ಉಡುಪಿ: ಅಂಬುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯವಾಗಿರುವ ಘಟನೆ ನಡೆದಿದೆ.
ಉಡುಪಿಯ ಕೋಟ ಮಣೂರು ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಉತ್ತರಕನ್ನಡ ಮೂಲದವರು ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಮೂವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಇಲ್ಲಿನ  ಮಣೂರು ಮಹಾಲಿಂಗೇಶ್ವರ ದೇಗುಲದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ  ಶನಿವಾರ ನಸುಕಿನ 1.30 ರ ವೇಳೆ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ ಹಾರಿ ಪಲ್ಟಿಯಾಗಿ ಭೀಕರ ಅವಘಡ ಸಂಭವಿಸಿದೆ. ಅವಘಡದಲ್ಲಿ ಆ್ಯಂಬುಲೆನ್ಸ್‌ನಲ್ಲಿ ದ್ದ ರೋಗಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 
ಆ್ಯಂಬುಲೆನ್ಸ್‌ನಲ್ಲಿ  ಕಾರವಾರದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಸಾಗಿಸಲಾಗುತ್ತಿತ್ತು. 
ಮೃತ ದುರ್ದೈವಿಗಳು ಕಾರವಾರದ ಆಮದಳ್ಳಿಯ ನಿವಾಸಿಗಳಾದ ಉಲ್ಲಾಸ್‌ ತಳೇಕರ್‌(45), ಅಶೋಕ್‌(37)ಮತ್ತು ಶೈಲೇಶ್‌ ಎಂದು ತಿಳಿದು ಬಂದಿದೆ. ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.