ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್ಐಆರ್ ದಾಖಲು
ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ....

ಬೆಂಗಳೂರು: ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಕೀರ್ತಿಗೌಡ ಅವರು ನೀಡಿದ ದೂರಿನ ಆಧಾರದ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಹಲ್ಲೆ ಮತ್ತು ಅಂಗಾಂಗ ಊನಗೊಳಿಸಿದ ಆರೋಪದಡಿ ಎಫ್‍ಐಆರ್ ದಾಖಲು ಮಾಡಲಾಗಿದೆ.
ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಈಗಾಗಲೇ ನಾಗರತ್ನ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 309 ಅಡಿ ಪ್ರಕರಣ ದಾಖಲಾಗಿತ್ತು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 326 ಸೆಕ್ಷನ್ ಹಾಕಲು ಪೊಲೀಸರು ನಿರ್ಧಾರ ಮಾಡಿದ್ದು, ಈ ಬಗ್ಗೆ ಕೋರ್ಟ್ ಗೆ ಪೊಲೀಸರು ಮನವಿ ಮಾಡಲಿದ್ದಾರೆ.
ದುನಿಯಾ ವಿಜಯ್ ಕಳೆದ ತಿಂಗಳು ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಗೌಡ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


