ಸಿಎಂ ಕುಮಾರಸ್ವಾಮಿ ದತ್ತಪೀಠ ವಿವಾದ ಬಗೆಹರಿಸಲಿ: ಪ್ರಮೋದ್ ಮುತಾಲಿಕ್
ಶ್ರೀರಾಮ ಸೇನೆ ಆಯೋಜಿಸಿರುವ ದತ್ತಮಾಲಾ ಅಭಿಯಾನದ ಅಂಗವಾಗಿ ಚಿಕ್ಕಮಗಳೂರಿನ ...

ಚಿಕ್ಕಮಗಳೂರು: ಶ್ರೀರಾಮ ಸೇನೆ ಆಯೋಜಿಸಿರುವ ದತ್ತಮಾಲಾ ಅಭಿಯಾನದ ಅಂಗವಾಗಿ ಚಿಕ್ಕಮಗಳೂರಿನ ಬಾಬಾಬುಡನ್ ಗಿರಿಯಲ್ಲಿ ಶೋಭಯಾತ್ರೆ ಆರಂಭವಾಗಿದೆ. ರಾಜ್ಯದ ವಿವಿಧ ಮೂಲಗಳಿಂದ ದತ್ತಪೀಠದ ಭಕ್ತರು ಆಗಮಿಸಿದ್ದು ಭದ್ರತೆಗಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಹೆಚ್ ಡಿ ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ಹುಬ್ಬಳ್ಳಿಯ ಈದ್ಗಾ ಮೈದಾನದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿದ್ದರು. ಅವರ ಪುತ್ರ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದತ್ತಪೀಠ ವಿವಾದವನ್ನು ಅದೇ ರೀತಿ ಬಗೆಹರಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಶೋಭಾ ಯಾತ್ರೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸುಮಾರು 2,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 27 ತಪಾಸಣಾ ಕೇಂದ್ರಗಳನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ, ಕಾನೂನು ವಿರುದ್ಧ ಹೋದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಪರೀಶ್ ಪಾಂಡೆ ತಿಳಿಸಿದ್ದಾರೆ.30 ವಿಶೇಷ ಮ್ಯಾಜಿಸ್ಟ್ರೇಟ್ ಗಳನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂಕೆ ಶ್ರೀರಂಗಯ್ಯ ತಿಳಿಸಿದರು.
ಇಂದಿನ ಶೋಭಾಯಾತ್ರೆ ಎಂ ಜಿ ರಸ್ತೆಯಿಂದ ಹಾದುಹೋಗಿ ಬೋಳರಾಮೇಶ್ವರ ದೇವಸ್ಥಾನದಲ್ಲಿ ಕೊನೆಯಾಗಲಿದೆ. ದತ್ತಪೀಠಕ್ಕೆ ಹೋಗುವ ಮುನ್ನ ಸಾರ್ವಜನಿಕ ಸಭೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


