ರಾಜ್ಯ

ಕೇಂದ್ರದಿಂದ 2,434 ಕೋಟಿ ರೂ, ಬರ ಪರಿಹಾರ ಬಿಡುಗಡೆಗೆ ರಾಜ್ಯಸರ್ಕಾರ ಮನವಿ !

ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ರಾಜ್ಯಕ್ಕೆ 2. 434 ಕೋಟಿ ರೂಪಾಯಿ ಆರ್ಥಿಕ ನೆರವನ್ನು ನೀಡಬೇಕೆಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿಕೊಂಡಿದೆ.

ಕೇಂದ್ರದಿಂದ 2,434 ಕೋಟಿ ರೂ, ಬರ ಪರಿಹಾರ ಬಿಡುಗಡೆಗೆ ರಾಜ್ಯಸರ್ಕಾರ ಮನವಿ !
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
Published On :

ನವದೆಹಲಿ: ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು  ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ  ರಾಜ್ಯಕ್ಕೆ 2. 434 ಕೋಟಿ ರೂಪಾಯಿ ಆರ್ಥಿಕ ನೆರವನ್ನು ನೀಡಬೇಕೆಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿಕೊಂಡಿದೆ.

ಜುಲೈ ಹಾಗೂ ಆಗಸ್ಟ್ ತಿಂಗಳ ನಡುವೆ ಕೆಲ ಕಡೆಗಳಲ್ಲಿ ಅನಿವೃಷ್ಟಿ ಹಾಗೂ ಮತ್ತೆ ಕೆಲವು ಕಡೆಗಳಲ್ಲಿ ಅನಾವೃಷ್ಟಿಯಿಂದಾಗಿ  ರಾಜ್ಯಕ್ಕೆ ಸುಮಾರು 16, 662 .48 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದೆ.

ಜುಲೈ - ಆಗಸ್ಟ್ ತಿಂಗಳಲ್ಲಿ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಅಪಾರ ನಷ್ಟ ಉಂಟಾಗಿತ್ತು, ಮತ್ತೊಂದೆಡೆ  ಒಳನಾಡು ಜಿಲ್ಲೆಗಳಲ್ಲಿ ತೀವ್ರ ಬರಗಾಲ ಎದುರಾಗಿತ್ತು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿನ 24 ಜಿಲ್ಲೆಗಳ 100 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದ್ದು,   ಅಂದಾಜು 16, 662.48 ಕೋಟಿ ರೂಪಾಯಿ ತೋಟಗಾರಿಕೆ ಮತ್ತು ಕೃಷಿಯಲ್ಲಿ ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ.

ಹಿಂದಿನ ವರ್ಷಗಳಲ್ಲಿ ಹೋಲಿಸಿದರೆ ಈ ಬಾರಿ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಮಟ್ಟ ಉತ್ತವಾಗಿದೆ. ಆದಾಗ್ಯೂ, 3611 ಸೂಕ್ಷ್ಮ ನೀರಾವರಿ ಕೆರೆಗಳ ಪೈಕಿ ಶೇ, 53 ರಷ್ಟು ಕೆರೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ. 159  ಗ್ರಾಮಗಳಿಗೆ  ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ನಗರ ಪ್ರದೇಶದಲ್ಲಿ 136 ವಾರ್ಡ್ ಗಳಿಗೆ ಕೆರೆಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. 98.26 ಲಕ್ಷ ಟನ್ ಒಣ ಮೇವು ಸಂಗ್ರಹವಿದ್ದು, ಮುಂದಿನ 16 ವಾರಗಳಿಗೆ ಮಾತ್ರ ಸಾಕಾಗಲಿದೆ, ಮುಂದೆ  ಜಾನುವಾರಗಳ ಮೇವಿಗೂ ಸಮಸ್ಯೆ ಉದ್ಬವವಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಹಾತ್ಮ ಗಾಂಧಿ  ಗ್ರಾಮೀಣ ಉದ್ಯೋಗ ಖಾತ್ರಿ ಅನುಷ್ಠಾನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.  ಸಣ್ಣ, ಅತಿ ಸಣ್ಣ ರೈತರ ಆರ್ಥಿಕ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ  ಬೆಳ ಸಾಲ ಮನ್ನಾ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿಯಲ್ಲಿ 100 ಕೋಟಿ  ಹಾಗೂ  ಬರ ಪೀಡಿತ ತಾಲೂಕುಗಳಿಗೆ 50 ಕೋಟಿ 50 ಲಕ್ಷರೂ. ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಸರ್ಕಾರ ವರದಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.