ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪಗೆ ಜಾಮೀನು ರಹಿತ ವಾರಂಟ್!
ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಪದೇ ಪದೇ ಗೈರಾಗಿರುವ ಶಾಸಕ, ಬಿಜೆಪಿ ಮ್ಮುಖಂಡ ಕೆ.ಎಸ್. ಈಶ್ವರಪ್ಪ....

Published On :
ಬೆಂಗಳೂರು: ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಪದೇ ಪದೇ ಗೈರಾಗಿರುವ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರಿಗೆ ಬೆಂಗಳೂರು ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೆ ಆದೇಶಿಸಿದೆ.
ಬೆಂಗಳೂರು ವಿಚಾರಣಾಧೀನ ನ್ಯಾಯಾಲಯ ವಾರಂಟ್ ಜಾರಿಗಾಗಿ ಆದೇಶಿಸಿದ್ದು ಸಿಟಿ ಸಿವಿಲ್ ಕೋರ್ಟ್ ವಿಶೇಷ ನ್ಯಾಯಾಲಯದಿಂದ ಈ ಆದೇಶ ಬಂದಿದೆ.
ಈಶ್ವರಪ್ಪ ಮುಂದಿನ ನವೆಂಬರ್ 24ಕ್ಕೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ಕೋರ್ಟ್ ಹೇಳಿದೆ.
2011ರ ಸಮಯ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದ ವೇಳೆ ಈಶ್ವರಪ್ಪ ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ವಕೀಲರಾದ ಧರ್ಮಪಾಲ್ ಖಾಸಗಿ ದೂರು ದಾಖಲಿಸಿದ್ದರು.ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಈಶ್ವರಪ್ಪ ಅವರಿಗೆ ವಾರಂಟ್ ಜಾರಿಗೊಳಿಸಲು ಹೇಳಿ ಅವರು ವಿಚಾರಣೆಗೆ ಹಾಜರಾಗುವುದನ್ನು ಕಡ್ಡಾಯ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


