ರಾಜ್ಯ

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭ: ಗಜಪಯಣಕ್ಕೆ ಅದ್ಧೂರಿ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭಗೊಂಡಿದ್ದು, ಮಹೋತ್ಸವದ ಮುನ್ನಡೆಯಾಗಿರುವ ಗಜಪಡೆ ಪಯಣಕ್ಕೆ ಭಾನುವಾರ ನಾಗರಹೊಳೆ ದ್ವಾರದ ಬಳಿಯಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು...

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭ: ಗಜಪಯಣಕ್ಕೆ ಅದ್ಧೂರಿ ಚಾಲನೆ
ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭ: ಗಜಪಯಣಕ್ಕೆ ಅದ್ಧೂರಿ ಚಾಲನೆ
Published On :
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭಗೊಂಡಿದ್ದು, ಮಹೋತ್ಸವದ ಮುನ್ನಡೆಯಾಗಿರುವ ಗಜಪಡೆ ಪಯಣಕ್ಕೆ ಭಾನುವಾರ ನಾಗರಹೊಳೆ ದ್ವಾರದ ಬಳಿಯಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. 
ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ದ್ವಾರದಲ್ಲಿ ಸಿಂಗಾರಗೊಂಡಿದ್ದ ಗಜಪಡೆಗೆ ದೀಪ ಬೆಳಗಿ, ಪುಷ್ಪ ಸಮರ್ಪಣೆಯೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. 
ಕ್ಯಾಪ್ಟನ್ ಅರ್ಜುನ, ವರಲಕ್ಷ್ಮಿ, ಚೈತ್ರ, ಗೋಪಿ, ವಿಕ್ರಮ, ಧನಂಜಯ ಆನೆಗಳಿಗೆ ಸಾಂಪ್ರದಾಯಿಕವಾಗಿ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. 
ಶಾಸಕ ಹೆಚ್ ವಿಶ್ವನಾಥ್ ಅವರ ಸೂಚನೆ ಮೇರೆಗೆ ಹಿಂದಿನ ಸಂಪ್ರದಾಯ ಮುಂದುವರೆಸಲಾಯಿತು. ದ್ವಾರ ಸಮೀಪ ನಿಂತಿದ್ದ ಕ್ಯಾಪ್ಟನ್ ಅರ್ಜುನ್ ಪಡೆಯ ಐದು ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಗಜಪಯಣಕ್ಕೆ ಚಾಲನೆ ನೀಡಿದರು.
ಶಾಸಕ ಹೆಚ್ ವಿಶ್ವನಾಥ್, ತನ್ವೀರ್ ಸೇಠ್, ಸಾರಾ ಮಹೇಶ್, ಅನಿಲ್ ಚಿಕ್ಕಮಾದು, ಅಶ್ವಿನಿಕುಮಾರ್, ಕೆ.ಮಹದೇವು, ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ಜಿ.ರವಿಶಂಕರ್, ಮೈಸೂರಿನ ಡಿಸಿಎಫ್ ಸಿದ್ದರಾಮಪ್ಪ ಸೇರಿದಂತೆ ಇನ್ನಿತರೆ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳ ವೃಂದ ಭಾಗಿಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.